ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ) ವತಿಯಿಂದ, ಗ್ರಾಮಾಂತರ ವ್ಯಾಪ್ತಿಯ ಮಂಗಳೂರು ತಾಲೂಕು ಮಟ್ಟದ ಕನ್ನಡರಾಜ್ಯೋತ್ಸವದ ಅಂಗವಾಗಿ ಕನ್ನಡ ಗೀತೆ ಸ್ಪರ್ಧಾ ಕಾರ್ಯಕ್ರಮ ಮಂಗಳಜ್ಯೋತಿ ಸಮಗ್ರ ಶಾಲೆ, ವಾಮಂಜೂರು ಇಲ್ಲಿ ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳ ಜ್ಯೋತಿ ಸಮಗ್ರ ಶಾಲೆಯ ಆಡಳಿತ ಸಂಚಾಲಕರಾದ ಗಣೇಶ್ ಭಟ್ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡುತ್ತಾ ಪ್ರತಿಯೊಂದು ಮಗುವಿಗೂ ಕನ್ನಡ ಭಾಷೆಯ ಬಗ್ಗೆ ಅಭಿಮಾನವನ್ನು ಪೋಷಕರು ಬಾಲ್ಯದಲ್ಲಿ ಮೂಡಿಸುವಂತಾಗಲಿ ಎಂದು ಶುಭ ಹಾರೈಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ಯಾಮಲ ಸಿ.ಕೆ. ಇವರು ಅತಿಥಿ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡುತ್ತ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಗೀತೆ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕನ್ನಡಕ್ಕೆ 2000 ದಷ್ಟು ಪುರಾತನವಾದ ಇತಿಹಾಸವಿದೆ. ಕನ್ನಡದ ಏಕೀಕರಣಕ್ಕಾಗಿ ದುಡಿದ ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತಾ ಇಲ್ಲಿ ಕನ್ನಡ ನಾಡಿನಲ್ಲಿ ಜನಿಸಿದವರು ಧನ್ಯರು.ಕನ್ನಡದ ಅಳಿವು ಉಳಿವಿಗಾಗಿ ನಾವೆಲ್ಲರೂ ಶ್ರಮಿಸೋಣ ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಮಂಗಳಜ್ಯೋತಿ ಸಮಗ್ರ ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ್ ಆಚಾರ್ಯ ಮತ್ತು ಉಷಾ ಹಿರಿಯ ಮೇಲ್ವಿಚಾರಕರು ಉಪಸ್ಥಿತರಿದ್ದರು. ಮೇಲ್ಕಾಣಿಸಿದ ಗೀತಾ ಸ್ಪರ್ದಾ ತೀರ್ಪುಗಾರರಾಗಿ ರಾಜೇಶ್ವರಿ, ನಳಿನಿ ಪಾಲ್ಗೊಂಡಿದ್ದರು. ಗೀತಾ ಸ್ಪರ್ಧೆಯಲ್ಲಿ ಒಟ್ಟು 39 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸ್ಪರ್ಧೆಯನ್ನು(5-8,9-12,13-16) ವರ್ಷಗಳ ವಯೋಮಿತಿಯ ವಿಭಾಗದಲ್ಲಿ ನಡೆಸಲಾಯಿತು, ವಿದ್ಯಾರ್ಥಿಗಳಿಗೆ ಪ್ರಥಮ, ದ್ವೀತಿಯ, ತೃತೀಯ ಬಹುಮಾನಗಳನ್ನು ಮುಖ್ಯ ಅತಿಥಿಗಳು ವಿತರಿಸಿದರು. ಮೇಲ್ವಿಚಾರಕಿ ಅಶ್ವಿನಿ ಮತ್ತು ಶಾರದ ಕಾರ್ಯಕ್ರಮವನ್ನು ನಿರೂಪಿಸಿದರು.ಹಿರಿಯ ಮೇಲ್ವಿಚಾರಕರಾದ ಶೀಲಾವತಿಯವರು ವಂದಿಸಿದರು.
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.