ಮಂಗಳೂರು(www.vknews.in): ಅನಿವಾಸಿ ಕನ್ನಡಿಗರ ಅಂತಾರಾಷ್ಟ್ರೀಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್)ನ ಐದನೇ ವಾರ್ಷಿಕೋತ್ಸವದ ಅಂಗವಾಗಿ ಡಿಸೆಂಬರ್ 3ರಂದು ನಗರದ ನೆಹರೂ ಮೈದಾನದಲ್ಲಿ ‘ಕನೆಕ್ಟ್- 2018’ ಸಾಮುದಾಯಿಕ ಸಮ್ಮಿಲನ ನಡೆಯಲಿದೆ.
ಇದರ ಪ್ರಮುಖ ಕಾರ್ಯಕ್ರಮವಾಗಿ 11ಜೋಡಿ ಹೆಣ್ಣು ಮಕ್ಕಳ ಆದರ್ಶ ವಿವಾಹ ಹಾಗೂ ‘ದಾರುಲ್ ಅಮಾನ್ ವಸತಿ’ ಯೋಜನೆಗೆ ಚಾಲನೆ ನೀಡಲಿದೆ. ಅಂದು ಬೆಳಗ್ಗೆ 10 ಗಂಟೆಗೆ ದಫ್ ಪ್ರದರ್ಶನದೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ತಾಜುಶ್ಶರೀಅ ಅಲಿ ಕುಂಞಿ ಉಸ್ತಾದ್ ಶಿರಿಯ ದುವಾ ನೆರವೇರಿಸಲಿದ್ದಾರೆ.
ಕರ್ನಾಟಕ ಸುನ್ನಿ ಕೋರ್ಡಿನೇಶನ್ ಸಮಿತಿ ಅಧ್ಯಕ್ಷ ಶರಫುಲ್ ಉಲಮಾ ಪಿ.ಎಂ. ಅಬ್ಬಾಸ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ, ತಾಜುಲ್ ಫುಖಹಾಅ ಪಿಎಂ ಇಬ್ರಾಹೀಂ ಮುಸ್ಲಿಯಾರ್ ಬೇಕಲ್, ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ನಿಖಾಹ್ ಕಾರ್ಯಕ್ರಮಕ್ಕೆ ನೇತೃತ್ವ ನೀಡಿ ಆಶೀರ್ವಚನ ನೀಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
12 ಗಂಟೆಗೆ ಕೆಸಿಎಫ್ ಯುಎಇ ಪ್ರಾಯೋಜಿತ ದಾರುಲ್ ಅಮಾನ್ ವಸತಿ ಯೋಜನೆಗೆ ಅಲ್ಪಸಂಖ್ಯಾತ ಕಲ್ಯಾಣ ಮತ್ತು ಹಜ್ ಹಾಗೂ ವಕ್ಫ್ ಸಚಿವ ಝಮೀರ್ ಅಹ್ಮದ್ ಚಾಲನೆ ನೀಡಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಐವನ್ ಡಿಸೋಜಾ, ಮನಪಾ ಮೇಯರ್ ಭಾಸ್ಕರ ಮೊಯ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಎಸ್ಸೆಸ್ಸೆಫ್ ಮತ್ತು ಎಸ್.ವೈ.ಎಸ್. ಸಂಘಟನೆಯ ಇಸಾಬಾ ಟೀಂ, ರೈಟ್ ಟೀಂ, ಟೀಂ ಹಸನೈನ್ ತಂಡಗಳಿಂದ ಇಲಲ್ ಹಬೀಬ್ ಮೀಲಾದ್ ಜಾಥ ನಡೆಯಲಿದೆ. ಸುನ್ನಿ ಕೋರ್ಡಿನೇಶನ್ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಪಿ. ಅಹ್ಮದ್ ಸಖಾಫಿ ಕಾಶಿಪಟ್ನ ಉದ್ಘಾಟನೆ ನೆರವೇರಿಸುವರು.
ಸಂಜೆ 4 ಗಂಟೆಗೆ ಮೀಲಾದ್ ಸ್ನೇಹ ಸಂಗಮ ನಡೆಯಲಿದ್ದು, ದ.ಕ. ಸುನ್ನಿ ಸೆಂಟರ್ ಕೇಂದ್ರ ಸಮಿತಿ ಅಧ್ಯಕ್ಷ ಸಯ್ಯಿದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಳ್ ಉದ್ಘಾಟಿಸಲಿದ್ದಾರೆ. ಎಸ್.ವೈ.ಎಸ್. ರಾಜ್ಯಾಧ್ಯಕ್ಷ ಜಿ.ಎಂ.ಎ. ಕಾಮಿಲ್ ಸಖಾಫಿ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್ಸೆಸ್ಸೆಫ್ ಇಹ್ಸಾನ್ ಕರ್ನಾಟಕ ಸಮಿತಿಯ ಅಧ್ಯಕ್ಷ ಎನ್.ಕೆ.ಎಂ. ಶಾಫಿ ಸಅದಿ ಬೆಂಗಳೂರು, ರಾಜ್ಯ ಹಜ್ ಸಮಿತಿ ಸದಸ್ಯ ಹಾಗೂ ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಸಂದೇಶ ನೀಡಲಿದ್ದಾರೆ.
ಸಂಜೆ 6 ಗಂಟೆಗೆ ಹುಬ್ಬುರ್ರಸೂಲ್ ಸಮ್ಮೇಳನ ನಡೆಯಲಿದೆ. ದ.ಕ. ಜಿಲ್ಲಾ ಮುಸ್ಲಿ ಸಂಯುಕ್ತ ಜಮಾಅತ್ ಖಾಝಿ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ದುವಾ ನೆರವೇರಿಸಲಿದ್ದಾರೆ. ರಾಜ್ಯ ಸುನ್ನಿ ಜಂಇಯ್ಯತುಲ್ ರಾಜ್ಯಾಧ್ಯಕ್ಷ ತಾಜುಲ್ ಪುಖಹಾ ಬೇಕಲ್ ಇಬ್ರಾಹೀಂ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ಮಅದಿನ್ ಅಕಾಡೆಮಿ ಮಲಪ್ಪುರಂ ಸಂಸ್ಥೆಯ ಅಧ್ಯಕ್ಷ ಬದ್ರುಸ್ಸಾದಾತ್ ಸಯ್ಯಿದ್ ಇಬ್ರಾಹೀಂ ಖಲೀಲುಲ್ ಬುಖಾರಿ ಕಡಲುಂಡಿ ಉದ್ಘಾಟಿಸಲಿದ್ದಾರೆ. ಅಖಿಲ ಭಾರತ ಸುನ್ನಿ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಹುಬ್ಬುರ್ರಸೂಲ್ ಭಾಷಣ ಮಾಡಲಿದ್ದಾರೆ. ಮಾಜಿ ಕೇಂದ್ರ ಸಚಿವ ಹಾಜಿ ಸಿ.ಎಂ. ಇಬ್ರಾಹೀಂ ಸಂದೇಶ ಭಾಷಣ ನೀಡಲಿದ್ದಾರೆ. ಅಲ್ಲದೆ ಕಾರ್ಯಕ್ರಮದಲ್ಲಿ ಹಲವಾರು ಸಾದಾತುಗಳು, ಉಲಮಾ, ಉಮರಾ ಪ್ರಮುಖರು ಭಾಗವಹಿಸಲಿದ್ದಾರೆ. ಪ್ರಸ್ತುತ ರಜೆ ನಿಮಿತ್ತ ಊರಿನಲ್ಲಿ ಇರುವ ಕೆಸಿಎಫ್ ಒಮಾನ್ ನ ಸದಸ್ಯರು ಕೂಡಲೇ ಹೆಸರು ನೊಂದಾಯಿಸಬೇಕೆಂದು ಹಾಗೂ ಈ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಕೆಸಿಎಫ್ ಒಮಾನ್ ರಾಷ್ಟ್ರೀಯ ಕಮಿಟಿಯ ಅಧ್ಯಕ್ಷರಾದ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ಎಮ್ಮೆಮ್ಮಾಡು ಇವರು ಕರೆನೀಡಿದ್ದಾರೆ.
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.