ಬುಧವಾರ ರಾತ್ರಿ ಸುರಿದ ಮಳೆಗೆ ಮಲ್ಲೂರು ಪ್ರದೇಶದಲ್ಲಿ ಕೃತಕ ನೆರೆ ಉಂಟಾದ ದೃಶ್ಯ
ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಮಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರ ಒರಟು ಹಾಗೂ ಉಡಾಫೆ ವರ್ತನೆಗೆ ಪ್ರತೀ ವರ್ಷವೂ ಮಳೆಗೆ ಇಲ್ಲಿನ ಹಲವು ಮನೆಗಳು ಕೃತಕ ನೆರೆಯಿಂದ ಭಾಧಿತವಾಗುತ್ತಿರುವ ಬಗ್ಗೆ ಗ್ರಾಮಸ್ಥರು ಮತ್ತೆ ಈ ಬಾರಿಯೂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷವೂ ಮಳೆಗಾಲ ಸಮೀಪಿಸುವಾಗ ಚರಂಡಿ ಅವ್ಯವಸ್ಥೆಯಿಂದಾಗಿ ಇಲ್ಲಿನ ಮನೆ-ಅಂಗಡಿಗಳಿಗೆ ನೀರು ನುಗ್ಗಿ ಕೃತಕ ನೆರೆಯ ಪರಿಸ್ಥಿತಿ ತಲೆ ದೋರುತ್ತದೆ. ಈ ಬಗ್ಗೆ ಇಲ್ಲಿನ ಪಂಚಾಯತ್ ಅಧ್ಯಕ್ಷ ಈಸುಬು ಅವರಿಗೆ ಸ್ಥಳೀಯರು ಮನವಿ ನೀಡುತ್ತಲೇ ಬಂದಿದ್ದಾರೆ. ಆದರೆ ಒಮ್ಮೆಯೂ ಇಲ್ಲಿನ ಅಧ್ಯಕ್ಷರು ಗ್ರಾಮಸ್ಥರ ಸಂಕಷ್ಟಕ್ಕೆ ಸ್ಪಂದಿಸಿಲ್ಲ ಎನ್ನುವುದು ಇಲ್ಲಿನ ಜನರ ಆಕ್ರೋಶಕ್ಕೆ ಕಾರಣ.
ಪಂಚಾಯತ್ ಅಧ್ಯಕ್ಷ
ಈ ಬಾರಿಯೂ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಹಲವು ಮನೆಗಳಿಗೆ ನುಗ್ಗಿದ್ದು, ಜನ ರಾತ್ರಿ ಜಾಗರಣೆ ಮಾಡುವಂತಾಗಿದೆ. ಈ ಬಾರಿ ಮತ್ತೆ ಇಲ್ಲಿನ ನಿವಾಸಿಗಳು ಅಧ್ಯಕ್ಷರನ್ನು ಭೇಟಿಯಾಗಿ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದು, ಈಗಲೂ ಅಧ್ಯಕ್ಷರದ್ದು ಹೌದು ಬಸವ ಹೌದು, ಅಲ್ಲ ಬಸವ ಅಲ್ಲ ಎಂಬಂತಹ ಪ್ರತಿಕ್ರಿಯೆ ಮಾತ್ರವಾಗಿದೆ ಎಂದು ಸ್ಥಳೀಯರಾದ ಜಮೀಳಾ, ಮುಹಮ್ಮದ್ ಮೋನು, ಕರೀಂ ಮೊದಲಾದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇಲ್ಲಿನ ಮಹಾಲಿಂಗೇಶ್ವರ ದೇವಸ್ಥಾನಕ್ಕೂ ಮಳೆ ನೀರಿನಿಂದ ತೀವ್ರ ತೊಂದರೆ ಉಂಟಾಗಿದೆ.
ಪಂಚಾಯತ್ ಅಧ್ಯಕ್ಷ ತೀವ್ರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ತೀವ್ರ ಆಕ್ರೋಶಿತಗೊಂಡಿರುವ ಇಲ್ಲಿನ ಗ್ರಾಮಸ್ಥರು ಈ ಬಾರಿ ಸಮಸ್ಯೆಗೆ ಪರಿಹಾರ ಒಂದೆರಡು ದಿನಗಳಲ್ಲಿ ಕಲ್ಪಿಸದೆ ಇದ್ದಲ್ಲಿ ಅಧ್ಯಕ್ಷರ ಮನೆಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ರಮಾನಾಥ ರೈ ಹೆಸರೇಳಿ ಜಾರುವ ಅಧ್ಯಕ್ಷ
ಮಾಜಿ ಸಚಿವ ರಮಾನಾಥ ರೈ ಅವರ ಕೃಪಾಕಟಾಕ್ಷದಿಂದ ಈಸುಬು ಇಲ್ಲಿನ ಪಂಚಾಯತ್ ಅಧ್ಯಕ್ಷರಾಗಿದ್ದಾರೆ ಎನ್ನಲಾಗಿದ್ದು, ತನ್ನ ಅಧಿಕಾರಾವಧಿಯಲ್ಲಿ ಯಾವುದೇ ಜನಪರ ಕಾರ್ಯಗಳನ್ನು ಮಾಡದ ಇವರು ಜನ ಏನೇ ಸಮಸ್ಯೆ ಹೇಳಿಕೊಂಡು ಸಮೀಪಿಸಿದರೂ ಮಾಜಿ ಸಚಿವ ರಮಾನಾಥ ರೈ ಅವರ ಹೆಸರೇಳಿ ಕೈ ತೊಳೆದುಕೊಳ್ಳುತ್ತಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಾಜಿ ಸಚಿವ ರಮಾನಾಥ ರೈ ಅವರಾದರೂ ಇಲ್ಲಿನ ಅಧ್ಯಕ್ಷರಿಗೆ ಬುದ್ದಿ ಮಾತು ಹೇಳಿ ವರ್ತನೆ ಸರಿಪಡಿಸುವಂತೆ ಜನ ಆಗ್ರಹಿಸಿದ್ದಾರೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
ಕೆಲಸ ಮಾಡದಿದ್ದರೆ ಚುನಾವಣೆಯಲ್ಲಿ ತಕ್ಕ ಪಾಠ ಕಳಿಸಬೇಕಿತ್ತು. ಅದನ್ನು ಬಿಟ್ಟು ಈವಾಗ ಗೋಲು ಹೊಯ್ದರೆ ಏನು ಪ್ರಯೋಜನ
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.