ನವದೆಹಲಿ (www.vknews.com) : ಜಾರ್ಖಂಡ್ ರಾಜ್ಯದಲ್ಲಿ ಮೋಟಾರ್ ಬೈಕ್ ಕಳ್ಳ ಎಂಬ ಅನುಮಾನದ ಮೇಲೆ ಅಮಾಯಕ ಮುಸ್ಲಿಂ ಯುವಕನನ್ನು ಥಳಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದೆ.
ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿ, ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಮತ್ತು ಹುತಾತ್ಮ ಎಂದು ಪರಿಗಣಿಸಿದ ಬಿಜೆಪಿ ಆಡಳಿತವು, ಅಲ್ಪಸಂಖ್ಯಾತರು ಮತ್ತು ದಲಿತರನ್ನು ಭಯ ಮತ್ತು ಹತಾಶೆಯ ಸ್ಥಿತಿಯಲ್ಲಿಡಲು ತನ್ನ ಬೀದಿ ಗೂಂಡಾಗಳಿಗೆ ಕೊಲೆ ಮತ್ತು ಹಿಂಸಾತ್ಮಕ ಕೃತ್ಯಗಳೊಂದಿಗೆ ಮುಂದುವರಿವಂತೆ ಸಂದೇಶ ಕಳುಹಿಸುತ್ತಿದೆ. ಇದು ಸಂಘಪರಿವಾರದ `ನವ ಭಾರತ’ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಟೀಕಿಸಿದ್ದಾರೆ.
ಅಧಿಕಾರಕ್ಕೆ ಮರಳಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಭಾಷಣದಲ್ಲೇ ಅಲ್ಪಸಂಖ್ಯಾತರಿಗೆ, ವಿಶೇಷವಾಗಿ ಮುಸ್ಲಿಮರಿಗೆ ರಕ್ಷಣೆ ನೀಡುವ ಮಾತನ್ನಾಡಿ, “ಸಬ್ ಕಾ ವಿಶ್ವಾಸ್” ಗಳಿಸಲು ಕೆಲಸ ಮಾಡುವ ಭರವಸೆ ನೀಡಿದ್ದನ್ನು ಫೈಝಿ ಈ ಸಂದರ್ಭದಲ್ಲಿ ನೆನಪಿಸಿದ್ದಾರೆ. ಆದಾಗ್ಯೂ, ವಾಸ್ತವ ಮಾತ್ರ ಭಿನ್ನವಾಗಿದ್ದು, ಮುಸ್ಲಿಮರ ಮೇಲಿನ ಹಿಂಸಾಚಾರವು ಮತ್ತಷ್ಟು ಭೀಕರತೆಯೊಂದಿಗೆ ಪುನಃ ಆರಂಭವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಕೊಲೆಗಾರ ಜನಸಮೂಹದ ವಿರುದ್ಧ ಹೋರಾಡಲು ಸಾರ್ವಜನಿಕರು ಒಗ್ಗೂಡಬೇಕಾದ ಸಮಯ ಬಂದಿದೆ ಎಂದು ಅವರು ಕರೆ ನೀಡಿದ್ದಾರೆ. ಭಾರತದಲ್ಲಿ ಏಕತೆ ಮತ್ತು ಸಹೋದರತ್ವ ಮೇಲುಗೈ ಸಾಧಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇದು ದೇಶಕ್ಕೆ ವಿನಾಶಕಾರಿಯಾಗಿ ಪರಿಣಮಿಸಲಿದೆ ಎಂದು ಫೈಝಿ ಮುನ್ನೆಚ್ಚರಿಕೆ ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.