ಉಳ್ಳಾಲ(ವಿಶ್ವಕನ್ನಡಿಗ ನ್ಯೂಸ್): ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(CITU)ನ ಉಳ್ಳಾಲ ವಲಯ ಸಮ್ಮೇಳನವು ತಾ. 21-07-2019ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಕುತ್ತಾರಿನ ಮುನ್ನೂರು ಯುವಕ ಮಂಡಲದಲ್ಲಿ ಜರುಗಲಿದೆ ಎಂದು CITU ಪ್ರಕಟಣೆ ತಿಳಿಸಿದೆ.
ಸಮ್ಮೇಳನದ ಉದ್ಘಾಟನೆಯನ್ನು CITU ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು ನೆರವೇರಿಸಲಿದ್ದು,ಮುಖ್ಯ ಅತಿಥಿಗಳಾಗಿ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಜಿಲ್ಲಾ ಉಪಾಧ್ಯಕ್ಷರಾದ ಪದ್ಮಾವತಿ ಶೆಟ್ಟಿಯವರು ಭಾಗವಹಿಸಲಿದ್ದಾರೆ. ಧ್ವಜಾರೋಹಣವನ್ನು CITU ಹಿರಿಯ ಮುಖಂಡರಾದ ರಾಜೀವಿ ಶೆಟ್ಟಿ ಚೆಂಬುಗುಡ್ಡೆಯವರು ನೆರವೇರಿಸಲಿದ್ದು,ಸಭೆಯ ಅಧ್ಯಕ್ಷತೆಯನ್ನು CITU ಉಳ್ಳಾಲ ವಲಯ ಅಧ್ಯಕ್ಷರಾದ ಕ್ರಷ್ಣಪ್ಪ ಸಾಲ್ಯಾನ್ ರವರು ವಹಿಸಲಿದ್ದಾರೆ.ಸಮ್ಮೇಳನ ನಡೆಯುವ ಸ್ಥಳಕ್ಕೆ ಕಾಂ.ಕರಿಯಪ್ಪ ಗಟ್ಟಿ ನಗರವೆಂದೂ,ಸಮ್ಮೇಳನದ ಸಭಾಂಗಣಕ್ಕೆ ಕಾಂ.ಸುಶೀಲ ವೇದಿಕೆಯೆಂದು ನಾಮಕರಣ ಮಾಡಲಾಗಿದೆ.
ಸಮ್ಮೇಳನದಲ್ಲಿ ಬೀಡಿ,ಕಟ್ಟಡ, ಬಿಸಿಯೂಟ, ಆಶಾ, ಅಂಗನವಾಡಿ, ಅಟೋರಿಕ್ಷಾ, ಪಿಂಚಣಿ ಸೇರಿದಂತೆ ವಿವಿಧ ವಿಭಾಗದ ಕಾರ್ಮಿಕರ ಸಂಘಟನೆಗಳಿಂದ 150ಕ್ಕೂ ಮಿಕ್ಕಿದ ಪ್ರತಿನಿಧಿ ಸಂಗಾತಿಗಳು ಭಾಗವಹಿಸಲಿದ್ದು,ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಪ್ರಮುಖ ನಿರ್ಣಯಗಳನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಪ್ರಬಲ ಕಾರ್ಮಿಕ ಚಳುವಳಿಯನ್ನು ಕಟ್ಟಲು,ನೂತನ ನಾಯಕತ್ವವನ್ನು ಕೂಡ ಈ ಸಮ್ಮೇಳನವು ಆಯ್ಕೆ ಮಾಡಲಿದೆ ಎಂದು ತಿಳಿಸಿರುವ CITU,ಸಮ್ಮೇಳನದ ಉದ್ಘಾಟನಾ ಸಮಾರಂಭಕ್ಕೆ ವಿವಿಧ ವಿಭಾಗದ ಕಾರ್ಮಿಕರು,ನೌಕರರು, ಮದ್ಯಮ ವರ್ಗದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು CITU ಉಳ್ಳಾಲ ವಲಯ ಕಾರ್ಯದರ್ಶಿ ಯು.ಜಯಂತ ನಾಯಕ್ ರವರು ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.