ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ನಗರಸಭೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಅಕ್ರಮವಾಗಿ ಕೊಳಾಯಿ ಸಂಪರ್ಕ ಮತ್ತು ಮೋಟರ್ ಅಳವಡಿಸಿಕೊಂಡಿರುವ ವ್ಯಕ್ತಿಗಳ ವಿರುಧ್ಧ ಕಠಿಣ ಕ್ರಮ ಜರುಗಿಸುವುದಾಗಿ ನಗರಸಭೆಯ ಪೌರಾಯುಕ್ತ ಜಿ.ಎನ್.ಚಲಪತಿ ಎಚ್ಚರಿಕೆ ನೀಡಿದರು.
ನಗರದ 20ನೇ ವಾರ್ಡ್ ನ ನಿಸಾರ್ ಪಾಳ್ಯದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗುತ್ತಿರುವ ಸಮಸ್ಯೆಗಳನ್ನು ಖುದ್ದಾಗಿ ವೀಕ್ಷಿಸಿ ಮಾತನಾಡಿದ ಅವರು ಪ್ರತಿಯೊಬ್ಬ ನಾಗರಿಕರಿಗೆ ಕುಡಿಯುವ ನೀರು ಸರಬರಾಜು ಮಾಡಲು ನಗರಸಭೆ ಆಡಳಿತ ಬದ್ದವಾಗಿದೆ ಕುಡಿಯುವ ನೀರು ಪೂರೈಕೆಗಾಗಿ ಕೊರೆಯುತ್ತಿರುವ ಕೊಳವೆಬಾವಿಗಳು ವೈಫಲ್ಯದಿಂದ ನೀರಿನ ಸಮಸ್ಯೆ ಉದ್ಬವಿಸಿದೆ ಯಾವ ಕೊಳವೆಬಾವಿಯಲ್ಲಿ ನೀರಿನ ಪ್ರಮಾಣ ಎಷ್ಟಿದೆ ಅದನ್ನು ಪರಿಶೀಲಿಸಿ ಎಲ್ಲರು ಸಮಾನವಾಗಿ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ನಗರದಲ್ಲಿ ಕುಡಿಯುವ ನೀರು ಪಡೆಯುವ ಸಲುವಾಗಿ ಕೆಲವರು ಅಕ್ರಮವಾಗಿ ಕೊಳಾಯಿ ಸಂಪರ್ಕ ಪಡೆದುಕೊಂಡಿದ್ದಾರೆ ಜೊತೆಗೆ ಮೋಟರ್ ಅಳವಡಿಸಿ ನೀರು ಪಡೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಪ್ರತಿಯೊಂದು ವಾರ್ಡಿಗೆ ಭೇಟಿ ನೀಡಿ ಪರಿಶೀಲನೆ ಕಾರ್ಯ ನಡೆಸುತ್ತಿದ್ದು ಯಾರಾದರು ಅಕ್ರಮವಾಗಿ ನೀರು ಸಂಪರ್ಕ ಪಡೆದುಕೊಂಡರೇ ಅದನ್ನು ಕೂಡಲೇ ಕಡಿತಗೊಳಿಸುವ ಜೊತೆಗೆ ಕಾನೂನು ರೀತಿಯ ಕ್ರಮ ಜರುಗಿಸಲಾಗುತ್ತದೆ ಎಂದರು.
ಕುಡಿಯುವ ನೀರು ಪೂರೈಕೆಗಾಗಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಂಡು ತರುವಾಯ ಯಾರಿಗೂ ನೀರು ಪೂರೈಕೆ ವಿಚಾರದಲ್ಲಿ ತಾರತಮ್ಯ ಆಗಬಾರದೆಂದು ಜಲಗಾರರನ್ನು ಸೂಚನೆ ನೀಡಲಾಗಿದೆ ಜೊತೆಗೆ ಶಾಸಕರ ವಿಶೇಷ ಕಾಳಜಿಯಿಂದ ನಾಗರಿಕರಿಗೆ ಶುಧ್ಧ ನೀರು ಪೂರೈಕೆ ಮಾಡಲು ನಗರದ ವಿವಿಧ ವಾರ್ಡ್ ಗಳಲ್ಲಿ 10 ನೀರು ಶುಧ್ಧಿಕರಣ ಘಟನೆಗಳನ್ನು ಅಳಡಿಸಲು ಯೋಜನೆ ಸಿದ್ದಪಡಿಸಿದ್ದು ಅತಿ ಶೀಘ್ರದಲ್ಲಿ ಅನುಷ್ಠಾನಕ್ಕೆ ತರಲಾಗುವುದೆಂದರು.
ನಿಸಾರ್ ಪಾಳ್ಯದಲ್ಲಿ ಯಾರಾದರು ಅಕ್ರಮವಾಗಿ ನೀರು ಸಂಪರ್ಕ ಪಡೆದುಕೊಂಡಿದರೆ ಅಥವಾ ಮೋಟರ್ ಅಳವಡಿಸಿದರೆ ಕಾನೂನು ರೀತಿಯ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ ಪೌರಾಯುಕ್ತರು ಅಕ್ರಮವಾಗಿ ನಲ್ಲಿ ಸಂಪರ್ಕ ಪಡೆದುಕೊಂಡಿದ್ದರೇ ಅಥವಾ ಮೋಟರ್ ಅಳವಡಿಸಿಕೊಂಡಿದ್ದರೆ ತಮಗೆ ನೇರವಾಗಿ ಮಾಹಿತಿ ನೀಡಬೇಕೆಂದು ನಾಗರಿಕರಿಗೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಮನೆಯ ಕೊಳಚೆ ನೀರು ರಸ್ತೆಗೆ ಹರಿಸುತ್ತಿರುವುದನ್ನು ನೋಡಿ ಕಿಡಿಕಾರಿದ ಪೌರಾಯುಕ್ತರು ಕೂಡಲೇ ನೀರು ಸರಾಗವಾಗಿ ಹರಿಯಲು ಪೈಪ್ ಅಳವಡಿಸಿಕೊಳ್ಳಬೇಕೆಂದು ಸೂಚಿಸಿದರು ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ಕಾಪಾಡಲು ಪ್ರಥಮ ಆದ್ಯತೆ ನೀಡಲಾಗಿದೆ ಎಂದರು. ಈ ಸಂದರ್ಭದಲ್ಲಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಆಂಜಿನಪ್ಪ,ಸಿಬ್ಬಂದಿ ಅಪ್ಪಿ,ಕಾಂಗ್ರೇಸ್ ಮುಖಂಡ ಮಹಬೂಬ್ ಪಾಷ,ವಕೀಲ ನೌಷಾದ್ ಅಲೀ, ಬಾಬು, ಫಯಾಝ್ ಪಾಷ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.