ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಕಾರಣ ಶುಕ್ರವಾರವೂ ಅಗಸ್ಟ್ ೯ ರಂದು ಕೂಡಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಆದೇಶ ಹೊರಡಿಸಿದ್ದಾರೆ.ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಯಲ್ಲಿ ಕಳೆದು ಎರಡು ದಿನ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲಾಗಿತ್ತು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ,ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅಗಸ್ಟ್ ೯ ರಂದು ಕೂಡಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಉಡುಪಿ ಜಿ ಜಿಲ್ಲೆಗಳಲ್ಲಿ ವಿಪರೀತ ಮಳೆ(205 ಮೀ.ಮೀ) ಹಾಗೂ ಕರಾವಳಿ ತೀರ ಪ್ರದೇಶಗಳಲ್ಲಿ ಭಾರೀ ಗಾಳಿ ಬೀಸುವ ಸಂಭವವಿರುವುದಾಗಿ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿರುವುದರಿಂದ ಸಮುದ್ರ ಹಾಗೂ ನದಿಗಳಲ್ಲಿ ಮೀನುಗಾರಿಕೆಗೆ ಹಡಗು ಮತ್ತು ದೋಣಿಗಳು ತೆರಳದಂತೆ ತಿಳಿಸಿದ್ದಾರೆ.
