ಇಸ್ಲಾಬಾಮಾದ್(ವಿಶ್ವಕನ್ನಡಿಗ ನ್ಯೂಸ್): ಜಮ್ಮು- ಕಾಶ್ಮೀರದಲ್ಲಿನ ಮಕ್ಕಳು ಸುರಕ್ಷಿತವಾಗಿ ಶಾಲೆಗೆ ಮರಳಲು ವಿಶ್ವಸಂಸ್ಥೆ ನೆರವಾಗಬೇಕು ಎಂದು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಹಾಗೂ ಪಾಕಿಸ್ತಾನಿ ಶಿಕ್ಷಣ ಹಕ್ಕುಗಳ ಹೋರಾಟಗಾರ್ತಿ ಮಲಾಲ ಯೂಸಫ್ ಝಾಯಿ ವಿಶ್ವಸಂಸ್ಥೆಗೆ ಒತ್ತಾಯಿಸಿದ್ದಾರೆ.
ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಆಗಸ್ಟ್ 5 ರಿಂದಲೂ ಅಲ್ಲಿ ನಿರ್ಬಂಧ ವಿಧಿಸಲಾಗಿದ್ದು, ಶಾಲಾ, ಕಾಲೇಜುಗಳು ಮುಚ್ಚಲ್ಪಟ್ಟಿವೆ ಎಂದು ಮಲಾಲ ದುಃಖ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರಿಗಳ ಧ್ವನಿಗಳನ್ನು ಕೇಳಬೇಕಾಗಿದ್ದು, ಅಲ್ಲಿನ ಮಕ್ಕಳು ಸುರಕ್ಷಿತವಾಗಿ ಮರಳಿ ಶಾಲೆಗೆ ಹೋಗುವಂತಾಗಬೇಕು ಎಂದು ಮಲಾಲ ವಿಶ್ವಸಂಸ್ಥೆಗೆ ಮನವಿ ಮಾಡಿಕೊಂಡಿದ್ದಾಗಿ ಟ್ವೀಟ್ ಮಾಡಿದ್ದಾರೆ.
ಮಲಾಲ ರವರ ಟ್ವೀಟಿಗೆ ಮರು ಉತ್ತರಿಸಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಮಲಾಲ ಪಾಕಿಸ್ತಾನದಲ್ಲಿರುವ ಅಲ್ಲಿನ ಅಲ್ಪಸಂಖ್ಯಾತ ಮಕ್ಕಳ ಕುರಿತು ಇದೇ ಕಾಳಜಿ ವಹಿಸಲಿ ಎಂದು ಸವಾಲೆಸೆದಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.