ಅಮರಕವಿ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಆಚರಣೆ

ಗುಳೇದಗುಡ್ಡ (ವಿಶ್ವ ಕನ್ನಡಿಗ ನ್ಯೂಸ್) : ಇಲ್ಲಿನ ಶ್ರೀ ಎಸ್ಆರ್ ಶೆಟ್ಟರ್ ಮಹೇಶ್ ಪಿ.ಯು ಕಾಲೇಜ ಮತ್ತು ನೆಹರೂ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗುಳೇದಗುಡ್ಡ ಶಾಲೆಯಲ್ಲಿ ಇಂದು ವಿಜೃಂಭಣೆಯಿಂದ ಅಮರಕವಿ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಆಚರಣೆ ಆಚರಿಸಲಾಯಿತು.

ಹೌದು ಪ್ರಾರಂಭದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ನಮ್ಮ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಹಾಂತಯ್ಯ ಸರಗಣಾಚಾರಿ ಅವರು ಮತ್ತು ಪ್ರಾಚಾರ್ಯರ ಅನುಪಸ್ಥಿತಿಯಲ್ಲಿ ಶ್ರೀ ಸಿಕಂದರ್ ಪೆಂಡಾರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆಯನ್ನು ಅರ್ಪಿಸಿ ಪೂಜಿಸಿದರು.

ನಂತರ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಹಾಂತಯ್ಯ ಸರಗಣಾಚಾರಿ ಅವರು ಅಮರಕವಿ ಮಹರ್ಷಿ ವಾಲ್ಮೀಕಿ ಅವರ ಬಗ್ಗೆ ಮಾತನಾಡುತ್ತಾ “ಎಲ್ಲಿಯವರೆಗೆ ಭೂಮಿಯಲ್ಲಿ ಪರ್ವತ ಸಮುದ್ರ ನದಿಗಳಿರುತ್ತವೆಯೋ ಅಲ್ಲಿಯವರೆಗೂ ರಾಮಾಯಣ ಕಾವ್ಯ ಲೋಕದಲ್ಲಿ ಪ್ರಚಲಿತದಲ್ಲಿರುತ್ತದೆ”. ಆದ್ದರಿಂದ ಸೂರ್ಯಚಂದ್ರರಿರುವರೆಗೂ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಅಮರಕಾವ್ಯವಾಗಿರುತ್ತದೆ ಮತ್ತು ಇದನ್ನು ರಚಿಸಿರುವ ಮಹರ್ಷಿ ವಾಲ್ಮೀಕಿಯು ಅಮರಕವಿಯಾಗಿರುತ್ತಾರೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜು ಮತ್ತು ಶಾಲೆಯ ಎಲ್ಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವರದಿಗಾರರು : ರವಿಕುಮಾರ ಮುರಾಳ

 

ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...