(www.vknews.com) : ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾನಿಲಯದ ಸಂಕೀರ್ಣದಲ್ಲಿ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗಾಗಿ ಮ್ಯಾಗ್ಮಾ – 2019 ರಾಷ್ಟ್ರೀಯ ಮಟ್ಟದ ಅಂತರ ಕಾಲೇಜು ಸ್ಪರ್ಧೋತ್ಸವವು ದಿನಾಂಕ 22ನೇ ಅಕ್ಟೋಬರ್, 2019 ರಂದು ಜರಗಲಿದೆ. ಈ ಸ್ಪರ್ಧೋತ್ಸವವನ್ನು ಎಂ.ಬಿ.ಎ. ವಿಭಾಗದ ವತಿಯಿಂದ ಆಯೋಜಿಸಲಾಗಿದ್ದು ದೇಶದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಈ ಸ್ಪರ್ಧೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಮ್ಯಾಗ್ಮಾಷಿಯನ್ – ಮ್ಯಾನೇಜ್ಮೆಂಟ್ ವಿದ್ ಮ್ಯಾಜಿಕಲ್ ಮೈಂಡ್ಸ್ ಈ ಸ್ಪರ್ಧೋತ್ಸವದ ಶೀರ್ಷಿಕೆಯಾಗಿದೆ.
ದಿನಾಂಕ 22.10.2019 ರಂದು ಪೂರ್ವಾಹ್ನ 10.30 ಘಂಟೆಗೆ ಉದ್ಘಾಟನಾ ಕಾರ್ಯಕ್ರಮ ಜರಗಲಿದ್ದು, ಕೋಲ್ಕತಾದ ಕ್ಯಾಟಲಿಸ್ಟ್ ಪೋರ್ಟ್ ಪೋಲಿಯೋ ಮ್ಯಾನೇಜ್ಮೆಂಟ್ ಸರ್ವೀಸ್ನ ಮುಖ್ಯಸ್ಥರು ಹಾಗೂ ನ್ಯಾಷನಲ್ ಜಿಯೋಗ್ರಫಿ ವೈಲ್ಡ್ ಲೈಫ್ನ ಪ್ರಸಿದ್ಧ ಛಾಯಾಗ್ರಾಹಕರಾದ ಶ್ರೀ ಸಂತೋಷ್ ಗಿರಿ ಮೌಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ನೆರವೇರಿಸಲಿದ್ದಾರೆ. ಎ. ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಶ್ರೀನಿವಾಸ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಶ್ರೀ ಸಿ.ಎ. ಎ. ರಾಘವೇಂದ್ರ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಲಿಬೆ ಕಸ್ಟಂ ಟೀಸ್ ಇವರ ಮುಖ್ಯಸ್ಥರಾದ ಡಾ. ಕೆ.ಜಿ. ರಾಜಾ, ನಗರದ ಹೋಟೆಲ್ ರೂಫಾದ ವ್ಯವಸ್ಥಾಪಕರಾದ ಶ್ರೀ ನಿಶಾಂಕ್ ಸುವರ್ಣ, ಆಕ್ಸಿಸ್ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕರಾದ ಶ್ರೀ ಡಾರೆನ್ ಮೊಂತೆರೋ, ಎ. ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷರು ಹಾಗೂ ಶ್ರೀನಿವಾಸ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ ರಾವ್, ಕಾರ್ಯದರ್ಶಿ ಶ್ರೀಮತಿ ಮಿತ್ರಾ ಎಸ್. ರಾವ್ ಮತ್ತು ಶ್ರೀನಿವಾಸ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಪಿ. ಎಸ್. ಐತಾಳ್ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಎಂಬಿಎ ವಿಭಾಗದ ಪ್ರಾಧ್ಯಾಪಕರುಗಳಾದ ಪ್ರೊ. ಅನುಮೇಶ್ ಕಾರಿಯಪ್ಪ ಮತ್ತು ಪ್ರೊ. ಸಾಗರ್ರವರು ಈ ಸ್ಪರ್ಧೋತ್ಸವದ ಸಂಚಾಲಕರಾಗಿದ್ದು, ಶ್ರೀ ಕಾರ್ತಿಕ್ ನಾಯಕ್ ವಿದ್ಯಾರ್ಥಿ ಸಂಚಾಲಕರಾಗಿರುತ್ತಾರೆ. ಸುಮಾರು 25 ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಈ ಸ್ಪರ್ಧೋತ್ಸವದಲ್ಲಿ ಪಾಲ್ಗೊಂಡು ಸ್ಪರ್ಧೋತ್ಸವದ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ತಮ್ಮ ಪ್ರೌಢಿಮೆ ಪ್ರದರ್ಶಿಸಲಿದ್ದಾರೆ ಎಂದು ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.