ಸಚಿವ ಈಶ್ವರಪ್ಪ ಮಾತನಾಡಿದರು.
ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತೆರಿಗೆ ಸಂಗ್ರಹದಲ್ಲಿ ರಾಜ್ಯದಲ್ಲೇ ಅಗ್ರಸ್ಥಾನ ಕಾಯ್ದುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವುದು ಸರಕಾರದ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಲು 45 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ಒದಗಿಸುವುದಾಗಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಭರವಸೆ ನೀಡಿದರು.
ಬಂಟ್ವಾಳ ತಾಲೂಕಿನ ಗಡಿಯಾರದಲ್ಲಿ ನಿರ್ಮಾಣವಾಗಿರುವ ಮಾಣಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಉದ್ಘಾಟಿಸಿದ ಬಳಿಕ ಬಿ ಸಿ ರೋಡು ಸ್ಪರ್ಶಾ ಮಂದಿರದಲ್ಲಿ ನಡೆದ ಜಿಲ್ಲೆಯ ಗ್ರಾ ಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಒಗಳ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಗ್ರಾಮ ಪಂಚಾಯತ್ಗಳ ಸದಸ್ಯರ, ಸಿಬ್ಬಂದಿಗಳ ಸಮಸ್ಯೆ ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರತಿ ಗ್ರಾಮ ಪಂಚಾಯತ್ಗಳಲ್ಲಿ ಸ್ಮಶಾನಕ್ಕೆ ಭೂಮಿ ಕಾದಿರಿಸುವಿಕೆ, ಸರಕಾರಿ ಜಾಗ ಇಲ್ಲದಿದ್ದರೆ ಖಾಸಗಿ ಜಮೀನು ಖರೀದಿಸಿ ಈ ಉದ್ದೇಶ ಈಡೇರಿಸಲಾಗುವುದು, ಘನ-ದ್ರವ ತ್ಯಾಜ್ಯ ವಿಲೇವಾರಿಗೆ ಕ್ಲಸ್ಟರ್ ಯೋಜನೆ ಮೂಲಕ ಶುದ್ದೀಕರಣ ಘಟಕ ನಿರ್ಮಾಣ, ರಾಜ್ಯದ 6021 ಗ್ರಾ ಪಂ ಗಳಲ್ಲಿರುವ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೌರ ಶಕ್ತಿ ಬಳಸಲು ಯೋಜನೆ ರೂಪಿಸಲಾಗುವುದು, 1500 ಕೋಟಿ ರೂಪಾಯಿ ಅನುದಾನದೊಂದಿಗೆ ರಾಜ್ಯದ ಗ್ರಾಮೀಣ ರಸ್ತೆಗಳ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಜಿ ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಂಟ್ವಾಳ ತಾ ಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಜಿ ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ, ಕೃಷಿ ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಯು ಪಿ ಇಬ್ರಾಹಿಂ, ಪುತ್ತೂರು ತಾ ಪಂ ಅಧ್ಯಕ್ಷ. ರಾಧಾಕೃಷ್ಣ ಬೋರ್ಕರ್, ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಆರ್ ಸೆಲ್ವಮಣಿ, ಸಚಿವರ ವಿಶೇಷ ಅಧಿಕಾರಿ ಜಯರಾಮ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಮೊದಲಾದವರು ಭಾಗವಹಿಸಿದ್ದರು.
ಯೋಜನಾ ನಿರ್ದೇಶಕ ಮಧುಕುಮಾರ್ ಸ್ವಾಗತಿಸಿ, ಬಂಟ್ವಾಳ ಇಓ ರಾಜಣ್ಣ ವಂದಿಸಿದರು. ನಿವೃತ್ತ ಶಿಕ್ಷಕ ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.