ಮಡಿಕೇರಿ(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕದ ಕಾಶ್ಮೀರ ಕೊಡಗಿನ ಕೊಟ್ಟಮುಡಿಯಲ್ಲಿ ಕಾರ್ಯಚರಿಸುತ್ತಿರುವ ಧಾರ್ಮಿಕ ಲೌಕಿಕ ಸಮನ್ವಯ ವಿದ್ಯಾಸಂಸ್ಥೆ ಮರ್ಕಝುಲ್ ಹಿದಾಯ ಸಂಸ್ಥೆಯ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡದ ಉದ್ಘಾಟನೆಯನ್ನು ಭಾರತದ ಗ್ರ್ಯಾಂಡ್ ಮುಫ್ತಿ, ಅಖಿಲ ಭಾರತ ಸುನ್ನಿ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಲ್ತಾನುಲ್ ಉಲಮಾ ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಉದ್ಘಾಟಿಸಿದರು.
ಮರ್ಕಝ್ ದಅವಾ ಕಾಲೇಜು ವಿದ್ಯಾರ್ಥಿಗಳ ಆಕರ್ಷಕ ಸ್ವಾಗತ ಹಾಡು ಹಾಗೂ ಪವಿತ್ರ ಕುರಾನ್ ಪಾರಾಯಣದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಮರ್ಕಝ್ ಹಿದಾಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಖಾಫಿ ಸ್ವಾಗತ ಭಾಷಣ ನಿರ್ವಹಿಸಿದರು.
ಪ್ರಮುಖ ಅತಿಥಿ ಮರ್ಕಝ್ ನ ಸಹಾಯ ಹಸ್ತವೂ ಆದ ಶೇಖ್ ನಾಸರ್ ಅಲ್ ಖಮ್ಮಾಸ್, ಸುಲ್ತಾನುಲ್ ಉಲಮಾ ಎ ಪಿ ಉಸ್ತಾದ್ , ಮರ್ಕಝ್ ಹಿದಾಯ ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಸಖಾಫಿ ಅವರನ್ನು ಮರ್ಕಝ್ ಹಿದಾಯ ವತಿಯಿಂದ ಸನ್ಮಾನಿಸಲಾಯಿತು. ಪ್ರಳಯ ಭಾಧಿತ ಪ್ರದೇಶವಾದ ಕೊಂಡಂಗೇರೀ ಸಂತ್ರಸ್ತ್ರರಿಗೆ ಮನೆ ನಿರ್ಮಾಣಕ್ಕೆ ಸ್ಥಳಕ್ಕೆ ಸ್ವಿಸ್ ಗೋಲ್ಡ್ ವತಿಯಿಂದ ನೀಡುವ ಸಹಾಯದ ಮೊದಲ ಕಂತನ್ನು ಎ ಪಿ ಉಸ್ತಾದರಿಗೆ ಹಸ್ತಾಂತರಿಸಲಾಯಿತು.
ನಂತರ ಉಸ್ತಾದರು ಹುಬ್ಬುರ್ರಸುಲ್ ಪ್ರಭಾಷಣ ನಡೆಸಿದರು. ಭಾಷಣದಲ್ಲಿ ಪ್ರವಾದಿ ಪೈಗಂಬರ್ ( ಸ್ವ ಅ) ರವರ ಸಂದೇಶಗಳನ್ನು ಪಾಲಿಸುವ ಒಬ್ಬ ವ್ಯಕ್ತಿಯು ಭಯೋತ್ಪಾದಕನಾಗಲು ಸಾಧ್ಯವಿಲ್ಲ, ಪ್ರವಾದಿಯವರ ಮಾನವೀಯ ಸಂದೇಶಗಳನ್ನು , ಅವರ ಜೀವನ ಚರಿತ್ರೆಯನ್ನು ವಿವರಿಸಿದರು.ಹಾಗೂ ಮರ್ಕಝ್ ಸಂಸ್ಥೆಗಳ ಬಗ್ಗೆ ವಿವರಿಸಿದರು. ಪ್ರಳಯ ಭಾಧಿತ ಪ್ರದೇಶಗಳ ಸಂತ್ರಸ್ತರಿಗೆ ಮನೆನಿರ್ಮಾಣಕ್ಕೆ ಸಂಭಂದಿಸಿದಂತೆ ಚರ್ಚಿಸಿ ಕ್ರಮಕೈಗೊಳ್ಳವುದಾಗಿ ಹೇಳಿದರು. ಮರ್ಕಝ್ ಹಿದಾಯ ಸಂಸ್ಥೆಗೆ ಬರುವ ೨೦೨೦ನೆ ವರ್ಷಕ್ಕೆ ೨೦ವರ್ಷಗಳು ಪೂರ್ತಿಗೊಳ್ಳುತ್ತಿದ್ದು ಸಮ್ಮೇಳ ಬಗ್ಗೆನ ನಡೆಸಬೇಕೆಂದು ತಿಳಿಸಿದರು.
ಕೊಡಗು ಜಿಲ್ಲಾ ನಾಯಿಬ್ ಖಾಝಿ ಮಹ್ಮುದ್ ಮುಸ್ಲಿಯಾರ್, ಶಾಲಾ ಕಟ್ಟಡದ ಇಂಜಿನಿಯರ್ ಅವರನ್ನು ಸನ್ಮಾನಿಸಲಾಯಿತು. ಮರ್ಕಝ್ ಹಿದಾಯದಲ್ಲಿ ವಿಧ್ಯಾಭ್ಯಸಿಸಿ ದೇಶದ ವಿವಿಧ ಭಾಗಗಳಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ತೆರಳಿರುವ ೯ ವಿದ್ಯಾರ್ಥಿಗಳಿಗೆ ಸನದ್ ನೀಡಲಾಯಿತು. ನಂತರ ಬುರ್ದಾ ಮಜ್ಲಿಸ್ ಹಾಗೂ ಸಮಾರೋಪ ಸಮಾರಂಭ ನಡೆಯಿತು.
ವೇದಿಕೆಯಲ್ಲಿ ಕೂರ್ಗ್ ಜಂಞಯ್ಯತುಲ್ ಉಲಮಾ ಪ್ರ.ಕಾರ್ಯದರ್ಶಿ ಅಶ್ರಫ್ ಅಹ್ಸನಿ, ಶಾದುಲಿ ಫೈಝಿ , ಮಜೀದ್ ಮುಸ್ಲಿಯಾರ್ ಕೊಂಡಂಗೇರಿ, ಕರ್ನಾಟಕ ರಾಜ್ಯ ಎಸ್ ವೈ ಎಸ್ ಇಸಾಬ ಅಮೀರ್ ಉಮರ್ ಸಖಾಫಿ , ಎಸ್ ಎಸ್ ಎಫ್ ಕೊಡಗು ಜಿಲ್ಲಾಧ್ಯಕ್ಷರಾದ ಅಝೀಝ್ ಸಖಾಫಿ ಕೊಡ್ಲಿಪೇಟೆ, ಸಯ್ಯಿದ್ ಖಾತಿಂ ತಂಙಳ್ ಎರುಮಾಡ್, ಮರ್ಕಝ್ ಹಿದಾಯತ್ ದಅವಾ ಕಾಲೇಜು ಪ್ರಾಂಶುಪಾಲರಾದ ಶಿಹಾಬುದ್ದೀನ್ ನೂರಾನಿ, ಅಬೂಬಕರ್ ಹಾಜಿ ಹಾಕತ್ತೂರು, ಅಹಮದ್ ಹಾಜಿ ಕೊಟ್ಟಮುಡಿ, ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಕಾರ್ಯದರ್ಶಿ ಅಹ್ಮದ್ ಹಾಜಿ ಕುಂಜಿಲ, ಹಾರಿಸ್ ಕೊಟ್ಟಮುಡಿ, ಉಮರ್ ಸಖಾಫಿ ಕಂಬಳಬೆಟ್ಟು, ಎರ್ಮು ಹಾಜಿ ಕಾಟ್ರಕೊಲ್ಲಿ, ಯೂಸುಫ್ ಕೊಂಡಂಗೇರಿ, ಇಲ್ಯಾಸ್ ಮಡಿಕೇರಿ ಇನ್ನಿತರ ಧಾರ್ಮಿಕ ಸಾಮಾಜಿಕ ನೇತಾರರು, ಮರ್ಕಝ್ ವಿದ್ಯಾರ್ಥಿಗಳು, SSF SYS ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.