ತಲಪಾಡಿ : ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ

 

ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ತಲಪಾಡಿ ಸಮೀಪದ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತ ಶರೀರ ಭಾನುವಾರ ಪತ್ತೆಯಾಗಿದೆ.
ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಮೃತ ದೇಹ ಇದಾಗಿದ್ದು, ಆಕಸ್ಮಿಕ ಬಿದ್ದು ಮೃತರಾಗದ್ದಾರೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ಗೊತ್ತಾಗಿಲ್ಲ. ತುಂಬೆ ಡ್ಯಾಂ ಸಮೀಪದ ತಲಪಾಡಿಯ ನೇತ್ರಾವತಿ ನದಿಯಲ್ಲಿ ಕಾರ್ಯಾಚರಿಸುತ್ತಿರುವ ಮರಳು ಡ್ರೆಜ್ಜಿಂಗ್ ಯಂತ್ರದಲ್ಲಿ ಈ ಮೃತದೇಹ ಪತ್ತೆಯಾಗಿದೆ. ಇಲ್ಲಿನ ಕೆಲಸಗಾರರು ಇಂದು ಬೆಳಿಗ್ಗೆ ಮರಳು ಡ್ರೆಜ್ಜಿಂಗ್ ಕಾರ್ಯದಲ್ಲಿ ತೊಡಗಿರುವಾಗ ಮಿಷನ್ ಸಮೀಪ ಮೃತದೇಹ ತೇಲುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಬಂಟ್ವಾಳ ಪೆÇಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹ ಮೇಲಕ್ಕೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸೇರಿಸಿದ್ದಾರೆ.

ಪ್ರಧಾನ ವರದಿಗಾರರು,
ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...