ಕಲ್ಲಡ್ಕ : ಬಸ್ ಡಿಕ್ಕಿ ಹೊಡೆದು ಪಾದಚಾರಿ ಆಸ್ಪತ್ರೆಗೆ

 

 

ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ಕಲ್ಲಡ್ಕದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿ ಮಾಣಿ ಸಮೀಪದ ಬುಡೋಳಿ ನಿವಾಸಿ ಅಣ್ಣಿ ಪೂಜಾರಿ (65) ಎಂಬವರಿಗೆ ಸರಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ.

 

ಅಣ್ಣಿಪೂಜಾರಿ ಕಲ್ಲಡ್ಕ ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಸರಕಾರಿ ಬಸ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದ್ದು, ತಕ್ಷಣ ಅವರನ್ನು ಮಂಗಳೂರು ವೆನ್ಲಾಕ್ ಅಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಧಾನ ವರದಿಗಾರರು,
ವಿಶ್ವ ಕನ್ನಡಿಗ ನ್ಯೂಸ್

    Leave Your Comment

    Your email address will not be published.*

    ಚಾಟ್ ಮಾಡಿ
    1
    VK News Official Chat
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...