ಬಿಲ್ಲವ ಸಮಾಜಕ್ಕೆ ಸ್ಥಾನಮಾನ ದೊರಕಿಸಲು ಸ್ವಾಮೀಜಿಗಳು ಎಲರ್ಟ್ ಆಗಬೇಕು : ಸಚಿವ ಕೋಟ

ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಬಿಲ್ಲವ ಸಮಾಜಕ್ಕೆ ಸೂಕ್ತ ಸ್ಥಾನಮಾನ ದೊರೆಯುವ ನಿಟ್ಟಿನಲ್ಲಿ ಸಮುದಾಯದ ಸ್ವಾಮೀಜಿಗಳು ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿ ಮುಂದಡಿ ಇಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕಿವಿ ಮಾತು ಹೇಳಿದರು.

 

ಬಂಟ್ವಾಳ ಬಿಲ್ಲವ ಕಣ್ಮಣಿಗಳ ಅಭಿನಂದನಾ ಸಮಿತಿ, ತಾಲೂಕಿನ ಬಿಲ್ಲವ ಸಂಘಟನೆಗಳು, ಯುವವಾಹಿನಿ ಬಂಟ್ವಾಳ ಮತ್ತು ಮಾಣಿ ಘಟಕಗಳ ಸಹಭಾಗಿತ್ವದಲ್ಲಿ ಭಾನುವಾರ ಬಿ ಸಿ ರೋಡು ಸಮೀಪದ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ “ನಮ ಬಿರುವೆರ್ ಐಕ್ಯತಾ ಸಮಾವೇಶ”ದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ರಾಜ್ಯದ ದೈವಸ್ಥಾನ, ದೇವಸ್ಥಾನಗಳ ಅಭಿವೃದ್ಧಿಗಾಗಿ ಮುಜುರಾಯಿ ಇಲಾಖೆಯಯಿಂದ 55 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಸಣ್ಣ ದೈವಸ್ಥಾನ, ದೇವಸ್ಥಾನಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಡಲಾಗುವುದು ಎಂದರು.

 

ಶ್ರೀ ರಾಮಕ್ಷೇತ್ರ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಬಲ್ಯೊಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ ಮತ್ತು ಕುಕ್ಕಾಜೆ ಆಂಜನೇಯ ಕ್ಷೇತ್ರದ ಶ್ರೀಕೃಷ್ಣ ಗುರೂಜಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಕೆ ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

 

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಗೌರವಾಧ್ಯಕ್ಷ ಜಯ ಸಿ ಸುವರ್ಣ ಅವರಿಗೆ ಗೌರವಾಭಿನಂದನೆ ಮತ್ತು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ಡಾ ರಾಜಶೇಖರ ಕೋಟ್ಯಾನ್ ಅವರನ್ನು ಅಭಿನಂದಿಸಲಾಯಿತು.

 

ಮುಖ್ಯ ಅತಿಥಿಗಳಾಗಿ ಕಲಬುರ್ಗಿ ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ ಸದಾನಂದ ಪೆರ್ಲ, ಕುದ್ರೋಳಿ ಗೋಕರ್ಣ ಕ್ಷೇತ್ರದ ಅಧ್ಯಕ್ಷ ಎಚ್ ಎಸ್ ಸಾಯಿರಾಮ್, ಬೃಹತ್ ಮತ್ತು ಮದ್ಯಮ ಕೈಗಾರಿಕೆ ಇಲಾಖಾ ಸಚಿವರ ಆಪ್ತ ಸಹಾಯಕ ಜಗನ್ನಾಥ ಬಂಗೇರ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಜಯಂತ ನಡುಬೈಲು, ಶ್ರೀನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಮಹಿಳಾ ಸಮಿತಿ ರಾಜ್ಯಾಧ್ಯಕ್ಷೆ ಗೀತಾಂಜಲಿ ಸುವರ್ಣ, ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಬಿ ಇಂದಿರೇಶ್, ಮಾಣಿ ಘಟಕದ ಅಧ್ಯಕ್ಷ ರಮೇಶ್ ಮುಜಲ, ಚಿತ್ರ ನಟಿ ಚಿರಶ್ರೀ ಅಂಚನ್, ಸಮಿತಿಯ ಗೌರವಾಧ್ಯಕ್ಷರಾದ ರುಕ್ಮಯ ಪೂಜಾರಿ, ಸಂಜೀವ ಪೂಜಾರಿ, ಮಾಯಿಲಪ್ಪ ಸಾಲ್ಯಾನ್ ಮೊದಲಾದವರು ಭಾಗವಹಿಸಿದ್ದರು. ಇದೇ ವೇಳೆ ಸಮುದಾಯದ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

 

ಅಧ್ಯಕ್ಷ ಯಶವಂತ ದೇರಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಯ್ಲ ಪ್ರಾಸ್ತಾವನೆಗೈದರು. ಗೋಪಾಲ ಅಂಚನ್ ವಿವಿಧ ಬೇಡಿಕೆಗಳ ಮನವಿಯನ್ನು ವಾಚಿಸಿದರು. ದಿನೇಶ್ ಸುವರ್ಣ, ಮಹೇಶ್ ಕರ್ಕೆರಾ ಕಾರ್ಯಕ್ರಮ ನಿರೂಪಿಸಿದರು.

ಪ್ರಧಾನ ವರದಿಗಾರರು,
ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...