ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಕೈದಿಗಳನ್ನು ಸರಿಯಾದ ಸಮಯದಲ್ಲಿ ಬಿಡುಗಡೆ ಮಾಡಲಾಗುವುದು: ಅಮಿತ್ ಶಾ


ನವದೆಹಲಿ(ವಿಶ್ವಕನ್ನಡಿಗ ನ್ಯೂಸ್):
ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಕೈದಿಗಳನ್ನು ಸರಿಯಾದ ಸಮಯದಲ್ಲಿ ಬಿಡುಗಡೆ ಮಾಡಲಾಗುವುದು, ಮತ್ತು ಈ ವಿಷಯದಲ್ಲಿ ಕೇಂದ್ರವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಹೇಳಿದ್ದಾರೆ.

ನಾಯಕರನ್ನು ಬಿಡುಗಡೆ ಮಾಡುವ ನಿರ್ಧಾರ ಸ್ಥಳೀಯ ಸರ್ಕಾರಕ್ಕೆ ಬಿಟ್ಟದ್ದು. ಈ ವಿಷಯದಲ್ಲಿ ಕೇಂದ್ರ ಮಧ್ಯಪ್ರವೇಶಿಸುವುದಿಲ್ಲ. ನಾಯಕರು ಅಗತ್ಯಕ್ಕಿಂತ ಹೆಚ್ಚಿನ ದಿನಗಳನ್ನು ಜೈಲಿನಲ್ಲಿ ಕಳೆಯುವ ಅಗತ್ಯವಿಲ್ಲ. ಸಮಯ ಬಂದಾಗ ಸ್ಥಳೀಯ ಸರ್ಕಾರದ ನಾಯಕರನ್ನು ಬಿಡುಗಡೆ ಮಾಡಲಾಗುವುದು ಎಂದು ಅಮಿತ್ ಶಾ ಹೇಳಿದರು. ಕಾಶ್ಮೀರ ಸಂಪೂರ್ಣವಾಗಿ ಶಾಂತವಾಗಿದೆ ಎಂದರು.

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಮತ್ತು ಅವರ ತಂದೆ ಫಾರೂಕ್ ಅಬ್ದುಲ್ಲಾ ಮುಂತಾದ ನಾಯಕರು ಆಗಸ್ಟ್ 5 ರಿಂದ ಬಂಧನದಲ್ಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಅಧಿಕಾರವನ್ನು ತೆಗೆದುಹಾಕಿದ ಹಿನ್ನೆಲೆಯಲ್ಲಿ ನಾಯಕರನ್ನು ವಶಕ್ಕೆ ಪಡೆಯಲಾಗಿದೆ.

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...