ಅಸ್ಸಾಂ(ವಿಶ್ವಕನ್ನಡಿಗ ನ್ಯೂಸ್): ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ ಬಂದ ಬೆನ್ನಲ್ಲೇ ಅಸ್ಸಾಂನಲ್ಲಿ ರಾಜಕೀಯದಲ್ಲಿ ಬದಲಾವಣೆ ಕಂಡುಕೊಂಡಿದ್ದು ಬಿಜೆಪಿ ಮತ್ತು ಎಜಿಪಿ ಯ ಹಲವು ಮಂದಿ ಪದಾಧಿಕಾರಿಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
ಪೌರತ್ವ ಮಸೂದೆಯು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ವಲಸಿಗರಿಗೆ ಪೌರತ್ವ ನೀಡವ ಹೊಸ ಕಾನೂನಿಗೆ ವಿರುದ್ಧವಾಗಿ ಅಸ್ಸಾಂ ನಲ್ಲಿ ನಡೆಯುವ ಹೋರಾಟಗಾರರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯ ಹಿರಿಯ ಮುಖಂಡ ಜಗದೀಶ್ ಭೂಯಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.