ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಚೇರಿಯ ಆವರಣ ಮೇರಿಹಿಲ್ ನಲ್ಲಿ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀಮತಿ ಸಿಂಧೂ ಬಿ ರೂಪೇಶ್ I.A.S ಭಾಗವಹಿಸಲಿದ್ದಾರೆ ಗೌರವ ಉಪಸ್ಥಿತಿಯಲ್ಲಿ ಕಾನೂನು ಸುವ್ಯವಸ್ಥೆ ಪೋಲೀಸ್ ಉಪ ಆಯುಕ್ತ ಶ್ರೀ ಅರುಣಾಂಗ್ಯು ಗಿರಿ I.P.S.ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ದಯಾನಂದ ಕತ್ತಲಸಾರ್ ಭಾಗವಹಿಸಲಿದ್ದಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಠರಾದ ಡಾ||ಮುರಲೀ ಮೋಹನ್ ಚೂಂತಾರು ವಹಿಸಲಿದ್ದಾರೆ ಎಂದು ಜಿಲ್ಲಾ ಸಮಾದೇಷ್ಠರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.