ಬೆಂಗಳೂರು,(ವಿಶ್ವಕನ್ನಡಿಗ ನ್ಯೂಸ್): 71ನೇ ಗಣರಾಜ್ಯೋತ್ಸವ ದಿನಾಚರಣೆ” ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ ಬಳಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನವು ವಿದ್ಯುತ್ ದೀಪಾಲಂಕಾರದಿಂದ ಸಿಂಗಾರಗೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್,ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಗಣರಾಜ್ಯೋತ್ಸವ ಅಂಗವಾಗಿ ಸರ್ಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಸಿಂಗಾರಗೊಳಿಸಬೇಕೆಂದು ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿರುವ ಜಿಲ್ಲಾಡಳಿತ ಮೊದಲು ಜಿಲ್ಲಾಡಳಿತ ಭವನದಿಂದ ಸಿಂಗಾರಕ್ಕೆ ಚಾಲನೆ ನೀಡಲಾಗಿದೆ ಜಿಲ್ಲಾಡಳಿತದ ಕ್ರಮವನ್ನು ಸಂಘ ಸಂಸ್ಥೆಗಳು ಮತ್ತು ಜನಸಾಮಾನ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ