ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಾಂಗ್ರೇಸ್ ಪಕ್ಷದಲ್ಲಿ ಪ್ರಭಾವ ನಾಯಕರೆಂದು ಗುರುತಿಸಿಕೊಂಡಿರುವ ಹಾಗೂ ವಿಶೇಷವಾಗಿ ರಾಜಕೀಯ ವಲಯದಲ್ಲಿ ಟ್ರಬಲ್ ಶೂಟರ್ ಎಂದು ಖ್ಯಾತ ಹೊಂದಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಿರುವುದಕ್ಕೆ ಸ್ಥಳೀಯ ಕಾಂಗ್ರೇಸ್ ಕಾರ್ಯಕರ್ತರು ಸಂತಸಗೊಂಡಿದ್ದಾರೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ವಿ.ಮುನಿಯಪ್ಪ ಅವರೊಂದಿಗೆ ನಿಕಟ ಸಂಪರ್ಕವನ್ನು ಹೊಂದಿರುವ ಡಿಕೆ ಶಿವಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನ ಲಭಿಸಿದ ಕೂಡಲೇ ಕಾಂಗ್ರೇಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ.
ರಾಜದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಕಾಂಗ್ರೇಸ್ ಪಕ್ಷದ ಹೈಕಮಾಂಡ್ನಲ್ಲಿ ಉತ್ತಮ ಹೆಸರು ಇಟ್ಟುಕೊಂಡಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ತಡವಾದರು ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಪಕ್ಷದ ವರಿಷ್ಠರು ಸೂಕ್ತ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಜೊತೆಗೆ ಪಕ್ಷವನ್ನು ಸಂಘಟನೆ ಮಾಡಲು ಅವರೊಂದಿಗೆ ಮಾಜಿ ಸಚಿವ ಸತೀಶ್ ಜಾರ್ಕಿಹೊಳಿ,ಸಲೀಂ ಅಹಮದ್ ಹಾಗೂ ಈಶ್ವರ್ ಖಂಡ್ರೇ ಅವರನ್ನು ಕಾರ್ಯಾಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ಧೃಡ ನಿರ್ಧಾರ ತೆಗೆದುಕೊಂಡಿದ್ದು ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬರಲಿದೆಯೆಂದು ಕಾಂಗ್ರೇಸ್ ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಾಸಕರಿಗೆ ಸ್ಥಾನಮಾನ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಿರಿಯ ಕಾಂಗ್ರೇಸ್ ನಾಯಕರಾಗಿರುವ ಕ್ಷೇತ್ರದ ಶಾಸಕ ವಿ.ಮುನಿಯಪ್ಪ ಅವರಿಗೆ ಕೆಪಿಸಿಸಿಯಲ್ಲಿ ಸೂಕ್ತ ಸ್ಥಾನ ಲಭಿಸಬಹುದೆಂದು ಕಾಂಗ್ರೇಸ್ ಕಾರ್ಯಕರ್ತರು ಲೆಕ್ಕಾಚಾರದಲ್ಲಿ ತೊಡಗಿದ್ದಾರೆ ಈಗಾಗಲೇ ಕೆಪಿಸಿಸಿಯ ಉಪಾಧ್ಯಕ್ಷರಾಗಿ ಎಐಸಿಸಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಶಾಸಕರಿಗೆ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಬಹುದೆಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ ಡಿಕೆಶಿವಕುಮಾರ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಕ್ಷೇತ್ರದ ಶಾಸಕರಿಗೆ ಆನೆಬಲ ಬಂದಂತಾಗಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ಆರಂಭವಾಗಿದೆ.
ಕಾಂಗ್ರೇಸ್ ಪಕ್ಷದಲ್ಲಿ ಸುದೀಘವಾಗಿ ಸೇವೆ ಸಲ್ಲಿಸಿರುವ ಸಮರ್ಥ ವ್ಯಕ್ತಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷರಾಗಿ ಮಾಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ,ರಾಹುಲ್ಗಾಂಧಿ ಹಾಗೂ ಎಐಸಿಸಿಯ ಎಲ್ಲಾ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಮತ್ತಷ್ಟು ಸದೃಡಗೊಳಿಸಿ ಪಕ್ಷದ ವರಿಷ್ಠರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ ಎಂದು ಶಾಸಕ ವಿ.ಮುನಿಯಪ್ಪ ವಿಕೆ ನ್ಯೂಸ್ ನೊಂದಿಗೆ ಸಂತಸ ಹಂಚಿಕೊಂಡರು.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.