ಬಂಟ್ವಾಳ (www.vknews.com) : ಕೋವಿಡ್-19 ಮಹಾಮಾರಿ ವೈರಸ್ಸಿಗೆ ಕಳೆದ ವಾರ ಬಲಿಯಾದ ಬಂಟ್ವಾಳದ ಮುಖ್ಯಪೇಟೆಯ ರಥಬೀದಿ ನಿವಾಸಿ ಕೊರೊನಾ ಸೋಂಕಿತ ಮಹಿಳೆಯ ಅತ್ತೆ ಗುರುವಾರ ಮೃತಪಟ್ಟಿದ್ದಾರೆ. ಈ ಮೂಲಕ ಬಂಟ್ವಾಳದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಮಹಾಮಾರಿಗೆ ಇಬ್ಬರು ಬಲಿಯಾದಂತಾಗಿದೆ.
ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೃತ ಮಹಿಳೆಯ ಅತ್ತೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ. 75 ವರ್ಷದ ವೃದ್ದ ಮಹಿಳೆ ಎಪ್ರಿಲ್ 18 ರಿಂದ ಪಾರ್ಶ್ವವಾಯುಗೆ ಸಂಬಂಧಿಸಿದಂತೆ ಮಂಗಳೂರಿನ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಅವರನ್ನು ಮಂಗಳೂರಿನ ಕೋವಿಡ್-19 ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸಾಗಿಸಿ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೆ ಗುರುವಾರ ಸಂಜೆ ಸಾವನ್ನಪ್ಪಿದ್ದಾರೆ. ವೃದ್ಧೆಗೆ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆ ಏರಿಯಾವನ್ನು ಕ್ವಾರಂಟೈನ್ ಮಾಡಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.