ಕುಂದಾಪುರ,(ವಿಶ್ವ ಕನ್ನಡಿಗ ನ್ಯೂಸ್ ): ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಾಗೂ ಮಾಜಿ ಶಾಸಕಿ ವಿನ್ನಿಫ್ರೆಡ್ ಫೆರ್ನಾಂಡಿಸ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವ ದೊಂದಿಗೆ ಗುರುವಾರ ರೋಮನ್ ಕ್ರೈಸ್ತ ಸಮುದಾಯದ ಹೋಲಿ ರೋಜರಿ ಇಗರ್ಜಿಯಲ್ಲಿ ಅತ್ಯಂತ ಸರಳ ವಿಧಿಗಳ ಮೂಲಕ ನೆರವೇರಿಸಲಾಯಿತು. ಕುಂದಾಪುರ ವಲಯ ಧರ್ಮಗುರುಗಳಾದ ವಂ. ಸ್ಟ್ಯಾನಿ ತಾವ್ರೋ ಅವರ ಮಾರ್ಗದರ್ಶನದಲ್ಲಿ ನಡೆದ ಪ್ರಾರ್ಥನಾ ಹಾಗೂ ಪೂಜಾ ವಿಧಿಗಳಲ್ಲಿ ಧರ್ಮಗುರುಗಳಾದ ವಂ. ಆರ್ಥರ್ ಪಿರೇರಾ ಪ್ರಾರ್ಥನಾ ವಿಧಿ ನೆರವೇರಿಸಿದರು. ಸಹಾಯಕ ಧರ್ಮಗುರುಗಳಾದ ವಂ. ವಿಜಯ್ಡಿಸೋಜಾ ಹಾಗೂ ವಂ. ಪ್ರವೀಣ್ಮಾರ್ಟಿಸ್ಹಾಗೂ ಇಗರ್ಜಿಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಲೂಯಿಸ್ಜೆ ಫೆರ್ನಾಂಡಿಸ್ಇದ್ದರು.ಪೊಲೀಸ್ ಇಲಾಖೆಯ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ಗೌರವ ರಕ್ಷೆಯನ್ನು ನೀಡಲಾಯಿತು. ಈ ವೇಳೆ ಕುಂದಾಪುರ ಉಪವಿಭಾಗದ ಎಎಸ್ಪಿ ಹರಿರಾಂಶಂಕರ್, ಸರ್ಕಲ್ ಇನ್ಸ್ಪೆಕ್ಟರ್ ಗೋಪಿಕೃಷ್ಣ, ಉಪ ನಿರೀಕ್ಷಕರಾದ ಹರೀಶ್ ಆರ್ ನಾಯ್ಕ್ ಹಾಗೂ ರಾಜ್ ಕುಮಾರ್ ಇದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.