ತಿರುವನಂತಪುರಂ (ವಿಶ್ವ ಕನ್ನಡಿಗ ನ್ಯೂಸ್) : ಕೇರಳದಲ್ಲಿ ಮಾರಕವಾದ ಕೊರೋನಾ ವೈರಸ್ ಹತೋಟಿಗೆ ಬಂದಿದ್ದು, ಕಳೆದ 2 ದಿನಗಳಿಂದ ರಾಜ್ಯದಲ್ಲಿ ಯಾವುದೇ ಹೊಸ ಪಾಸಿಟಿವ್ ಪ್ರಕರಣಗಳು ಬಂದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿಲ್ಲ. ಪ್ರಸ್ತುತ ರಾಜ್ಯದಲ್ಲಿ 34 ಮಂದಿ ಮಾತ್ರ ಕೊರೊನಾ ವೈರಸ್ ಚಿಕಿತ್ಸೆಯಲ್ಲಿದ್ದಾರೆ. ಪ್ರಸ್ತುತ 84 ಹಾಟ್ ಸ್ಪಾಟ್ಗಳಿದ್ದು, ಕೊರೋನಾ ವೈರಸ್ ರಾಜ್ಯದಲ್ಲಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.