ಮುಂಬೈ (ವಿಶ್ವ ಕನ್ನಡಿಗ ನ್ಯೂಸ್ ) : ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಸುದ್ದಿ ವಾಹಿನಿಯ ಇತರ ಇಬ್ಬರ ವಿರುದ್ಧ ಮುಂಬೈನ ಬಾಂದ್ರಾದಲ್ಲಿರುವ ಮಸೀದಿಯೊಂದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಏಪ್ರಿಲ್ 14ರಂದು ಲಾಕ್ ಡೌನ್ ವಿಸ್ತರಿಸಿದ ಸಂದರ್ಭದಲ್ಲಿ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಾಂದ್ರಾ ರೈಲು ನಿಲ್ದಾಣಕ್ಕೆ ಆಗಮಿಸಿದ್ದರು. ಈ ಸಮಯದಲ್ಲಿ ಅರ್ನಬ್ ಗೋಸ್ವಾಮಿ ಅವರು ಮಸೀದಿಯ ಚಿತ್ರ ತೋರಿಸಿ ಮುಸ್ಲಿಮರ ವಿರುದ್ಧ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ರಝಾ ಎಜುಕೇಷನ್ ವೆಲ್ಫೇರ್ ಸೊಸೈಟಿ ಕಾರ್ಯದರ್ಶಿ ಇರ್ಫಾನ್ ಅಬೂಬಕರ್ ಶೈಖ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಪೈಧೋನಿ ಪೊಲೀಸ್ ಠಾಣೆಯಲ್ಲಿ ಅರ್ನಬ್ ಗೋಸ್ವಾಮಿ ಹಾಗೂ ಇತರೆ ಇಬ್ಬರ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.