ಬೆಂಗಳೂರು (www.vknews.com) : ರಾಜ್ಯದಲ್ಲಿ ಕೊರೋನ ಸೊಂಕು ಹೆಚ್ಚಾದರೆ ಅದಕ್ಕೆ ಸರಕಾರವೇ ನೇರ ಹೊಣೆಯಾಗುತ್ತದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೀರ್ ಹುಸೇನ್ ಆರೋಪಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಅವಸರದ ನಿರ್ಧಾರವನ್ನು ಕೈಗೊಳ್ಳುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜ್ಯವನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿರುವುದು ಆತಂಕದ ಬೆಳವಣಿಗೆಯಾಗಿದೆ. ಅವಸರದ ನಿರ್ಧಾರದ ಮೂಲಕ ಮಧ್ಯದ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟಿರುವುದು ಖಂಡನೀಯ.
ಬಿಎಸ್ವೈ ಅವರ ಅವಸರದ ಮತ್ತು ಪೂರ್ವ ಸಿದ್ದತೆಯಿಲ್ಲದ ನಿರ್ಧಾರ ಬಹುತೇಕ ಕಡೆಗಳಲ್ಲಿ ಸಾಮಾಜಿಕ ಅಂತರವನ್ನು ಜನ ಪಾಲಿಸಿದಂತೆ ಕಾಣುತ್ತಿಲ್ಲ. ಇದರಿಂದಾಗಿ ಕೊರೋನಾ ಸೋಂಕು ಉಲ್ಭಣಿಸಿದರೆ ಅದರ ಪೂರ್ಣ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವ ಅವರು, ಕೂಡಲೇ ಈ ವಿಚಾರವನ್ನು ಮರು ಪರಿಶೀಲನೆ ಮಾಡಿ ಬಡಕುಟುಂಬಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.