ತಿರುವನಂತಪುರಂ (ವಿಶ್ವ ಕನ್ನಡಿಗ ನ್ಯೂಸ್) : ಏರ್ ಇಂಡಿಯಾ ವಿಮಾನದಲ್ಲಿ ಅಬುಧಾಬಿ ಹಾಗೂ ದುಬೈನಿಂದ ವಾಪಸ್ ಕರೆತಂದ 363 ಜನರಲ್ಲಿ ಇಬ್ಬರಿಗೆ ಕೋವಿಡ್ -19 ಪರೀಕ್ಷೆಯಲ್ಲಿ ಪಾಸಿಟಿವ್ ಕಂಡು ಬಂದಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಂಕಿತ ವ್ಯಕ್ತಿಗಳಲ್ಲಿ ಒಬ್ಬರು ಕೋಝಿಕ್ಕೋಡ್ ಆಸ್ಪತ್ರೆಯಲ್ಲಿ ಹಾಗು ಮತ್ತೊಬ್ಬರು ಕೊಚ್ಚಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಎರಡು ಹೊಸ ಕೊರೊನಾ ಪ್ರಕರಣಗಳಿಂದ ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 505ಕ್ಕೆ ಏರಿಕೆಯಾಗಿದೆ. ಈ ಪೈಕಿ 484 ಜನರು ಗುಣಮುಖರಾಗಿದ್ದಾರೆ. 17 ಜನರು ಆಸ್ಪತ್ರೆಯಲ್ಲಿದ್ದಾರೆ. ನಾಲ್ಕು ಮಂದಿ ಮರಣ ಹೊಂದಿದ್ದಾರೆ ಎಂದು ಅವರು ತಿಳಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.