ಚಿಕ್ಕಬಳ್ಳಾಪುರ (www.vknews.com) : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, ಜಲ ಸಂರಕ್ಷಣೆ ಕಾಮಗಾರಿಗಳಿಗೆ ಆದ್ಯತೆ ನೀಡಿ, ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ, ಬೆಂಗಳೂರು ರವರ ಸಹಯೋಗದೊಂದಿಗೆ ವಿವಿಧ ಸ್ಥಳಗಳಲ್ಲಿನ ಪಂಚಾಯತ್ ರಾಜ್ ಸಂಸ್ಥೆಗಳು ‘ಅಂತರ್ಜಲ ಚೇತನ’ ಎಂಬ ಶೀರ್ಷಿಕೆಯಡಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಉತ್ತರ ಪಿನಾಕಿನಿ ನದಿ ಪುನಃಶ್ಚೇತನಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಸೋಮವಾರ ನಡೆದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ನರೇಗಾ ಯೋಜನೆಯ ತಾಂತ್ರಿಕ ಸಿಬ್ಬಂದಿಗಳಿಗೆ ಉತ್ತರ ಪಿನಾಕಿನಿ ನದಿ ಪುನಃಶ್ಚೇತನ ಯೋಜನೆಯ ಸಮರ್ಪಕ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದೊಂದಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಹಾಗೆಯೇ, ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸದರಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ರವೀಂದ್ರ ದೇಸಾಯಿ, ನಾಗರಾಜ್ ಗಂಗೊಳ್ಳಿ, ಕಿರಣ್ ರಾಮರೆಡ್ಡಿ, ಭೂಷಣ್, ರಾಘವ್, ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ತಾಂತ್ರಿಕ ಸಿಬ್ಬಂದಿಯವರು ನಲ್ಲಕದಿರೇನಹಳ್ಳಿ ಗ್ರಾಮದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.