ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ವರೆಗೂ ಹಾಲಿ ಪ್ರತಿನಿಧಿಗಳನ್ನೇ ಮುಂದುವರಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಅಧ್ಯಕ್ಷರು ಅಡ್ವಕೇಟ್ ತಾಹಿರ್ ಹುಸೇನ್ ಒತ್ತಾಯಿಸಿದ್ದಾರೆ.
‘ಗ್ರಾಮ ಪಂಚಾಯಿತಿಗಳಿಗೆ ಹೊಸ ಆಡಳಿತ ಸಮಿತಿ ರಚಿಸುವ ಅಥವಾ ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು. ತಾತ್ಕಾಲಿಕ ವ್ಯವಸ್ಥೆ ಮಾಡಲೇಬೇಕೆಂದಿದ್ದರೆ 1987ರಲ್ಲಿ ಮಾಡಿದಂತೆ ಅವಧಿ ವಿಸ್ತರಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಯಾವುದೇ ಕಾರಣಕ್ಕೂ ಆಡಳಿತಾಧಿಕಾರಿ ಅಥವಾ ಆಡಳಿತ ಉಸ್ತುವಾರಿಯನ್ನು ನೇಮಕ ಮಾಡಬಾರದು ಎಂದು ಆಗ್ರಹಿಸಿದ್ದಾರೆ.
ಕೋವಿಡ್ 19 ಸೋಂಕಿನ ಕಾರಣ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಅನೇಕ ಬದಲಾವಣೆಗಳು ಆಗಿವೆ. ಇದರ ಪರಿಣಾಮ ಮೇ ಅಂತ್ಯದೊಳಗೆ ನಡೆಯಬೇಕಿದ್ದ ಗ್ರಾಮ ಪಂಚಾಯಿತಿ ಚುನಾವಣೆ ಮೇಲೂ ಆಗಿದೆ ಎಂದು ಹೇಳಿದ್ದಾರೆ.
ಕೋವಿಡ್ 19 ಸೋಂಕಿನ ಪ್ರಯುಕ್ತ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಆರು ತಿಂಗಳ ಕಾಲ ಮುಂದೂಡುವುದು ಅನಿವಾರ್ಯವಾಗಿದೆ ಎಂದು ಸರ್ಕಾರ ಹೇಳಿದೆ, ಆದರೆ, ಆಡಳಿತಾಧಿಕಾರಿ ಅಥವಾ ಆಡಳಿತ ಉಸ್ತುವಾರಿ ನೇಮಕ ಸೂಕ್ತವಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ 19 ಸೋಂಕಿನ ಪರಿಸ್ಥಿತಿಯ ಸಮರ್ಪಕ ನಿರ್ವಹಣೆಯಲ್ಲಿ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಆಡಳಿತ ವರ್ಗದವರು ಕೂಡ ಮಹತ್ವದ ಪಾತ್ರ ವಹಿಸಿದ್ದಾರೆ. ಚುನಾವಣೆವರೆಗೂ ಹಾಲಿ ಪ್ರತಿನಿಧಿಗಳನ್ನೇ ಮುಂದುವರಿಸಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.