(www.vknews.com) : 1972 ನೇ ಇಸವಿಯಿಂದ ಪ್ರತಿ ವರ್ಷ ಜೂನ್ 5 ರಂದು ಪರಿಸರ ದಿನಾಚರಣೆಯನ್ನು ಆಚರಿಸುತ್ತಬಂದಿದ್ದೇವೆ. ನಾವು ವಾಸಿಸುತ್ತಿರುವ ಸುತ್ತ ಮುತ್ತಲಿನ ವಾತಾವರಣವೇ ನಮ್ಮ ಪರಿಸರ. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮ ಹೊಣೆ. ಆದರೆ ಅದು ನಮ್ಮಿಂದ ಸಾಧ್ಯವಾಗದೆಹೋಗುತ್ತಿರುವುದು ಒಂದು ಶೋಚನೀಯ ಸಂಗತಿ. ಇಂದಿನ ದಿನಗಳಲ್ಲಿ ನಾವು ಎದುರಿಸುತ್ತಿರುವ ಮೂರು ಮುಖ್ಯವಾದ ಪರಿಸರ ಮಾಲಿನ್ಯಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ.
ನಾವು ನಮ್ಮ ಸ್ವಾರ್ಥಕ್ಕಾಗಿ ಮರಗಿಡಗಳನ್ನು ಕಡಿದುಹಾಕುತ್ತೇವೆ. ಇದರಿಂದಾಗಿ ಹಸಿರು ವಿರಳವಾಗುತ್ತಹೋಗುತ್ತಿದೆ. ಈಗಲೆ ಎಚ್ಚೆತ್ತುಕೊಳ್ಳದೆಹೋದರೆ ಈಗಾಗಲೇ ಸುನಾಮಿ, ಬರ, ಮಹಾಪೂರದಂಥ ಪ್ರಕೃತಿ ವಿಕೋಪಗಳಿಗೆ ತುತ್ತಾಗುತ್ತಿರುವುದರ ಜೊತೆಗೆ ಇನ್ನೂ ಅತ್ಯಂತ ದಾರುಣವಾದ ಆಮ್ಲಜನಕದ ಕೊರತೆಯನ್ನು ಕೂಡ ಅನುಭವಿಸಬೇಕಾದ ಪರಿಸ್ಥಿತಿ ಬರುತ್ತದೆ.
ಈ ಜೈವಿಕ ವೈವಿಧ್ಯತೆಯನ್ನು ಕಾಪಾಡುವುದು ನಮ್ಮ ಆದ್ಯ ಕರ್ತವ್ಯ. ವಿಷಪೂರಿತ ವಸ್ತುಗಳ ಮತ್ತು ತ್ಯಾಜ್ಯಗಳಾದ ಪ್ಲಾಸ್ಟಿಕ್ ಇತ್ಯಾದಿಗಳ ಅನಧಿಕೃತ ಮಾರಾಟವನ್ನು ತಡೆಗಟ್ಟಬೇಕು. ಪರಿಸರಕ್ಕೆ ಹಾನಿಯಾಗದ ಅಗ್ಗದ ಇಂಧನಮೂಲಗಳ ಅನ್ವೇಷಣೆ ಮುಂದುವರಿಯಬೇಕು. ಏಕೆಂದರೆ ಪರಿಸರ ನಮ್ಮ ಜೀವನದ ಅವಿಭಾಜ್ಯ ಅಂಗ. ಪರಿಸರವಿಲ್ಲದೆ ಮಾನವನಿಲ್ಲ ಎಂಬ ನಿತ್ಯ ಸತ್ಯವನ್ನು ನಾವಿಂದು ನಮ್ಮ ಜೀವನದ ಗುರಿಯನ್ನಾಗಿಸಿಕೊಂಡು ಪರಿಸರ ಸಂರಕ್ಷಣೆಯತ್ತ ಮುನ್ನಡೆಯೋಣ. ವೇಗದ ಬದುಕಿನಲ್ಲಿ ಪರಿಸರ ಕಡೆಗಣಿಸುತ್ತಿರುವ ಮಾನವನ ಜೀವನ ಶೈಲಿ ಮುಂದೊಂದು ದಿನ ಅವನಿಗೇ ಮುಳ್ಳಾಗಬಹುದು, ಮನುಷ್ಯ ಪರಿಸರದ ಮೇಲೆ ನಡೆಸುತ್ತಿರುವ ದೌರ್ಜನ್ಯ ನಿಲ್ಲಿಸದಿದ್ದರೆ ಜೀವಿಗಳ ಆರೋಗ್ಯದ ಮೇಲೆ ಪ್ರತಿಕೂಲ ಪ್ರಭಾವ ಉಂಟಾಗುತ್ತದೆ, ಪರಿಸರ ಉಳಿಸಿ ಮಾನವ ಬದುಕನ್ನು ಹಸಿರಾಗಿಸೋಣ. ಬನ್ನಿ…
🖋 ಬಿಎಸ್ಆರ್ ಚೇರಂಭಾಣೆ (ಎಸ್ ಕೆ ಎಸ್ ಎಸ್ ಎಫ್ – ಜಿ ಸಿ ಸಿ ಕೊಡಗು ಜಿಲ್ಲೆ)
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.