ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ಕ್ಯಾಂಪಸ್ ಫ್ರಂಟ್ ಪುತ್ತೂರು ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ವಿತರಿಸುವ ಮೂಲಕ ಆಚರಿಸಲಾಯಿತು.
ಕ್ಯಾಂಪಸ್ ಫ್ರಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ವದಕತ್ ಶಾ ರವರು ವಿದ್ಯಾರ್ಥಿಗಳಿಗೆ ಸಸಿ ವಿತರಿಸಿದರು. ಕ್ಯಾಂಪಸ್ ಫ್ರಂಟ್ ಜಿಲ್ಲಾ ನಾಯಕರಾದ ಸವಾದ್ ಕಲ್ಲರ್ಪೆ ರವರು ಮಾತನಾಡಿ “ವಿದ್ಯಾರ್ಥಿಗಳು ಪರಿಸರದ ಮಹತ್ವವನ್ನು ಅರಿತುಕೊಂಡು ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕೆಂಬ” ಸಂದೇಶ ನೀಡಿದರು.
ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲೆ ಅಧ್ಯಕ್ಷರಾದ ರಿಯಾಝ್ ಅಂಕತ್ತಡ್ಕರವರು ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಅಥಾವುಲ್ಲಾ ಪೂಂಜಲ್ಕಟ್ಟೆ ಸದಸ್ಯರಾದ ಇಮ್ರಾನ್ ಪಿ ಜೆ, ರಿಯಾಝ್ ಕಡಂಬು ಹಾಗೂ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಅನ್ಸಾರ್ ಬೆಳ್ಳಾರೆ ಮತ್ತು ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.