(www.vknews.com) : ಕೃಷ್ಣ ಲೀಲಾ ಸಿನಿಮಾ ಖ್ಯಾತಿಯ ನಟಿ ಮತ್ತು ಅಶ್ವಿನಿ ನಕ್ಷತ್ರ ಧಾರಾವಾಹಿಯ ಮೂಲಕ ತನ್ನನ್ನು ಪರಿಚಯಿಸಿಕೊಂಡ ಕನ್ನಡದ ನಟಿ ಮಯೂರಿ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತಮ್ಮ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ
ಸುಮಾರು 10 ವರ್ಷಗಳಿಂದ ಪ್ರೀತಿಸುತ್ತಿದ್ದ ಬಾಲ್ಯದ ಗೆಳೆಯ ಅರುಣ್ ಜೊತೆ ರಾತ್ರಿ 2.30 ರಿಂದ 3 ಗಂಟೆಯ ಬ್ರಾಹ್ಮಿ ಮಹೂರ್ತದಲ್ಲಿ ನಟಿ ಮಯೂರಿ ಕುಟುಂಬದವರ ಒಪ್ಪಿಗೆ ಪಡೆದು ವಿವಾಹವಾಗಿದ್ದಾರೆ
ಪತಿ ಅರುಣ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡ್ತಿದ್ದು , ಕಷ್ಟದ ಕಾಲದಲ್ಲಿ ನಟಿ ಮಯೂರಿ ರವರಿಗೆ ನೆರವಾಗಿದ್ದರಂತೆ ಇನ್ನೂ ಬೆಂಗಳೂರಿನ ಜೆಪಿ ನಗರದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮುಂಜಾನೆಯ ಬ್ರಾಹ್ಮಿ ಮಹೂರ್ತದಲ್ಲಿ ಅರುಣ್, ಮಯೂರಿ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಅರುಣ್ ಜೊತೆ ಮಯೂರಿ ೧೦ ವರ್ಷಗಳಿಂದ ಪ್ರೀತಿಸುತ್ತಿದ್ದರು, ಮನೆಯವರ ಒಪ್ಪಿಗೆಯೊಂದಿಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಪ್ತಪದಿ ತುಳಿದಿದ್ದಾರೆ.