ಮಂಗಳೂರು (www.vknews.com) : ಕೊರೋನ ಮಹಾಮಾರಿ ಕಾರಣದಿಂದ ಸೃಷ್ಟಿಯಾಗಿರುವ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಸಮಸ್ಯೆಗಳನ್ನು ಮನಗಂಡು ಮಂಗಳೂರು, ಅಡ್ಯಾರ್ ನಲ್ಲಿರುವ ಬರಕಾ ಇಂಟರ್ ನ್ಯಾಷನಲ್ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳ 2020-2021 ನೇ ಸಾಲಿನ ಶಾಲಾ ಶುಲ್ಕದಲ್ಲಿ 33% ಕಡಿತಗೊಳಿಸುವ ಮಹತ್ವದ ನಿರ್ಧಾರವನ್ನು ಕೈಗೊಂಡು ಮಾದರಿಯಾಗಿದ್ದು ಉಳಿದ ಎಲ್ಲಾ ಶಿಕ್ಷಣ ಸಂಸ್ಥೆಗಳು ಕೂಡ ತಮ್ಮ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಕಡಿತಗೊಳಿಸಬೇಕೆಂದು ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹೆಚ್.ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳ ಪೋಷಕರು ಪ್ರಸ್ತುತ ಸಂದರ್ಭದಲ್ಲಿ ತುಂಬಾ ಆರ್ಥಿಕ ಸಂಕಷ್ಟಗಳ ಮಧ್ಯೆ ಸಿಲುಕಿಕೊಂಡು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿತರಾಗಿರುವಾಗ ಎಲ್ಲಾ ಶಿಕ್ಷಣ ಸಂಸ್ಥೆಗಳು ಶಾಲಾ ಶುಲ್ಕ ಕಡಿತಗೊಳಿಸಿದರೆ ಶಿಕ್ಷಣ ಸಂಸ್ಥೆಗಳ ಘನತೆ ಹೆಚ್ಚುವುದರೊಂದಿಗೆ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೂಡ ಸಿಗುವಂತಾಗುತ್ತದೆ.
ಆದ್ದರಿಂದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಕೂಡಲೇ ಈ ಮಹತ್ಕಾರ್ಯಕ್ಕೆ ಮುಂದಾಗಬೇಕು. ರಾಜ್ಯದ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಈ ಬಗ್ಗೆ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಬೇಕು. ಅಡ್ಯಾರ್ ಬರಕಾ ಇಂಟರ್ನ್ಯಾಷನಲ್ ಸಂಸ್ಥೆಯ ಈ ನಿರ್ಧಾರವನ್ನು ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮುಕ್ತ ಕಂಠದಿಂದ ಸ್ವಾಗತಿಸುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.