ಮಂಗಳೂರು (www.vknews.com) : ಸುಳ್ಯ ತಾಲೂಕಿನ ದುಗ್ಗಲಡ್ಕದಲ್ಲಿ ಜಾನುವಾರು ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿ ನೈತಿಕ ಪೊಲೀಸ್ ಗಿರಿ ಮಾಡಿದ ಸಮಾಜದ್ರೋಹಿ ದುಷ್ಟ ಶಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ ಡಿವೈಎಸ್ಪಿ, ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಮಾರ್ಗದರ್ಶನ ನೀಡಿದ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳು ಕರ್ತವ್ಯ ಪ್ರಜ್ಞೆ ಮೆರೆದಿರುವುದನ್ನು ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮುಕ್ತ ಕಂಠದಿಂದ ಪ್ರಶಂಶಿಸಿದೆ.
ಇತ್ತೀಚಿನ ಎರಡು ಘಟನೆಗಳಲ್ಲಿ ಕರಾವಳಿ ಪ್ರದೇಶದ ಕೋಮುಸಾಮರಸ್ಯವನ್ನು ಕೆಡಿಸುವ ಷಡ್ಯಂತ್ರ ಎದ್ದು ಕಾಣುತ್ತಿದ್ದು ಪೊಲೀಸ್ ಇಲಾಖೆಯ ಸಕಾಲಿಕ ಮಧ್ಯ ಪ್ರವೇಶದಿಂದ ದುರಂತವೊಂದು ತಪ್ಪಿದೆ.
ಸುಳ್ಯ ಪೊಲೀಸರು ಕೈಗೊಂಡ ಕ್ರಮಗಳು ಇಡೀ ಪೋಲೀಸ್ ಇಲಾಖೆಗೆ ಮಾದರಿಯಾಗಿದ್ದು, ಮುಂದಿನ ದಿನಗಳಲ್ಲಿ ಕರಾವಳಿ ಪ್ರದೇಶದಲ್ಲಿ ಯಾವುದೇ ದುಷ್ಟ ಶಕ್ತಿಗಳ ಸಮಾಜದ್ರೋಹಿ ಚಟುವಟಿಕೆಗಳಿಗೂ ಇದೇ ರೀತಿ ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹೆಚ್.ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಪೊಲೀಸ್ ಅಧಿಕಾರಿಗಳಲ್ಲಿ ವಿನಂತಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.