ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್): ಜಿಲ್ಲೆಯಲ್ಲಿ ಕೊರೋನ ನಿಯಂತ್ರಣ ಮತ್ತು ಸಾರ್ವಜನಿಕರ ಆರೋಗ್ಯ ಸುರಕ್ಷತೆಗಾಗಿ ರಾಜ್ಯ ಸರ್ಕಾರದ ಸೂಚನೆಯಂತೆ ರಚಿಸಲಾಗಿರುವ 14 ತಂಡಗಳು ಮಹತ್ವದ ಜವಾಬ್ದಾರಿ ಹೊಂದಿದ್ದು, ಪರಸ್ಪರ ಸಮನ್ವಯದಿಂದ ತಮಗೆ ನಿಯೋಜಿಸಿರುವ ಕಾರ್ಯಗಳನ್ನು, ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೋವಿಡ್ -19 ಪಾಸಿಟಿವ್ ಬಂದ ವ್ಯಕ್ತಿಗಳನ್ನು ಸ್ಥಳಾಂತರಿಸಲು ರಚಿಸಲಾಗಿರುವ ತಂಡದ ಸಿಬ್ಬಂದಿ ಐ.ಸಿ.ಎಂಆರ್ ಪೋರ್ಟಲ್ ನಲ್ಲಿ ಪಾಸಿಟಿವ್ ವರದಿ ಬಂದ ಕೂಡಲೇ ಸಂಬ0ದಪಟ್ಟ ರೋಗಿಯನ್ನು ತಕ್ಷಣ ಆಸ್ಪತ್ರೆಗೆ ಸ್ಥಾಂತರಿಸಲು ವ್ಯವಸ್ಥೆ ಮಾಡಬೇಕು , ಜಿಲ್ಲೆಯಲ್ಲಿ ಆಂಬುಲೆನ್ಸ್ ಮಾನಟರಿಂಗ್ ಸಿಸ್ಟಂ ಜಾರಿಗೊಳಿಸಿದ್ದು, ವ್ಯಕ್ತಿಯ ಮನೆಗೆ ಸಮೀಪದ ಆರೋಗ್ಯ ಕೇಂದ್ರದಲ್ಲಿರುವ ಆಂಬುಲೆನ್ಸ್ ಸಹಾಯದೊಂಗಿಗೆ ನಿಗಧಿತ ಆಸ್ಪತ್ರೆಗೆ ದಾಖಲಿಸಬೇಕು, ತುರ್ತು ಅಗತ್ಯವಿದ್ದಲ್ಲಿ ಖಾಸಗಿ ಆಸ್ಪತ್ರೆಯ ಅಂಬುಲೆನ್ಸ್ ಗಳನ್ನು ಬಳಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಯಾವುದೇ ಕಾರಣಕ್ಕೂ ಪಾಸಿಟಿವ್ ವರದಿ ಬಂದ ವ್ಯತಿಯನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ವಿಳಂಬ ಸಲ್ಲದು ,. ವಿಳಂಬವಾದಲ್ಲಿ ಇತರರಿಗೂ ಹರಡುವ ಸಂಭವ ಹೆಚ್ಚು ಎಂದು ಹೇಳಿದರು.ಜಿಲ್ಲೆಯಲ್ಲಿ ಬೆಡ್ ಮಾನಿಟರಿಂಗ್ ಸಿಸ್ಟಂ ಯೋಜನೆ ಸಿದ್ದಪಡಿಸಲಾಗುತ್ತಿದ್ದು, ಇದರಿಂದ ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್ ಗಳು ಖಾಲಿ ಇವೆ, ಸಮೀಪದ ಆಸ್ಪತ್ರೆ ಎಲ್ಲಿದೆ , ಆ ಆಸ್ಪತ್ರೆಯಲ್ಲಿ ಏನು ಸೌಲಭ್ಯಗಳಿವೆ ಎಂಬ ಮಾಹಿತಿ ಕೂಡಲೆ ಲಭ್ಯವಾಗಲಿದ್ದು, ವೃಥಾ ಆಸ್ಪತ್ರೆಗೆ ಅಲೆಯುವುದು ತಪ್ಪಲಿದೆ, ಜಿಲ್ಲೆಯಲ್ಲಿ ಈಗಾಗಲೇ ವಿವಿಧ ಆಸ್ಪತ್ರೆಗಳಲ್ಲಿ 2400 ಬೆಡ್ ಗಳನ್ನು ಕೋವಿಡ್-19 ರೋಗಿಗಳಿಗೆ ಮೀಸಲಿಡಲಾಗಿದ್ದು, ಮುಂಜಾಗ್ರತೆಗಾಗಿ ಇನ್ನೂಂದು ಸುಸಜ್ಜಿತ ಕೋವಿಡ್-19 ಆಸ್ಪತ್ರೆ ಸಿದ್ದಪಡಿಸಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಯ ನರ್ಸ್ಗಳಿಗೆ ಐ.ಸಿ.ಯು ನಲ್ಲಿ ಕಾರ್ಯ ನಿರ್ವಹಣೆಯ ವಿಧಾನ ಕುರಿತಂತೆ ಮಣಿಪಾಲದ ಕೆಎಂಸಿ ಯಲ್ಲಿ ವಿಶೇಷ ತರಬೇತಿಗೆ ನಿಯೋಜಿಸುವಂತೆ ಆರೋಗ್ಯ ಇಲಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.ಕೋವಿಡ್-19 ರೋಗಿಯ ಸಂಪರ್ಕ ಪತ್ತೆ ಹಚ್ಚುವುದನ್ನು ತ್ವರಿತವಾಗಿ ಮಾಡಿ, ಆತನ ಮೊಬೈಲ್ ನ ಸಿಡಿಆರ್ ಮೂಲಕ ಪ್ರಾಥಮಿಕ ಸಂಪರ್ಕಿತರ ಮಾಹಿತಿ ಪಡೆಯಿರಿ, ರೋಗಿಯ ಸಂಪರ್ಕದ ಮಾಹಿತಿ ಪಡೆಯುವಲ್ಲಿ ವಿಳಂಬವಾದಲ್ಲಿ ಅದು ಇಡೀ ಸಮಾಜಕ್ಕೆ ಕಂಟಕವಾಗಲಿದೆ, ಸಂಪರ್ಕ ದ ಮಾಹಿತಿ ಪಡೆಯಲು ಪ್ರತಿ ತಾಲೂಕಿಗೆ ವಿವಿಧ ಇಲಾಖೆಯ 50 ಮಂದಿ ಸಿಬ್ಬಂದಿಯನ್ನು ನಿಯೋಜಿಸಿ, ಅವರಿಗೆ ಅಗತ್ಯ ತರಬೇತಿ ನೀಡಿ, ಈ ತಂಡದಲ್ಲಿ ಅತ್ಯಂತ ಕ್ಷಿಪ್ರ ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.ಜಿಲ್ಲೆಯಲ್ಲಿ ಶೀತ, ಕೆಮ್ಮ, ನಗಡಿ, ಜ್ವರದಿಂದ ಬಳಲುತ್ತಿರುವ ರೋಗಿಗಳ ವಿವರ ನೀಡದ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳ ಲೈಸೆನ್ಸ್ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ ಡಿಸಿ, ಪ್ರತಿದಿನ ವರದಿ ನೀಡುವಂತೆ ಹಾಗೂ ಶೀಘ್ರದಲ್ಲಿ ಪ್ರಕರಣ ಪತ್ತೆ ಹಚ್ಚಿದ್ದಲ್ಲಿ ಸಮುದಾಯಕ್ಕೆ ಹರಡದಂತೆ ತಡೆಯಲು ಮತ್ತು ರೋಗಿಯ ಜೀವ ಉಳಿಸಲು ಸಾಧ್ಯವಾಗಲಿದೆ, ಎಲ್ಲಾ ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರು ಪ್ರತಿ ದಿನ ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ, ಶೀತ, ಕೆಮ್ಮ, ನಗಡಿ, ಜ್ವರದಿಂದ ಬಳಲುತ್ತಿರುವ ರೋಗಿಗಳ ವರದಿ ನೀಡಬೇಕು, ಇಂತಹ ಲಕ್ಷಣಗಳಿದ್ದು , ರೋಗಿಯ ತಪಾಸಣೆ ಬಿಟ್ಟು ಹೋಗಿ , ಆ ವ್ಯಕ್ತಿಗೆ ಕೋವಿಡ್ ನಿಂದ ಮರಣ ಸಂಭವಿಸಿದ್ದಲ್ಲಿ , ಸಂಬ0ದಪಟ್ಟ ವ್ಯಾಪ್ತಿಯ ಸಿಬ್ಬಂದಿಗಳ ನಿರ್ಲಕ್ಷö್ಯತನದ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.ಕಂಟೈನ್ಮೆ0ಟ್ ವಲಯದ ಕುರಿತು ನಿಯಮ ಬದಲಾಗಿದ್ದು, ಸ್ಥಳಿಯವಾಗಿ 2-3 ಪ್ರಕರಣ ಕಂಡುಬ0ದಲ್ಲಿ ಸಂಬ0ದಪಟ್ಟ ವ್ಯಕ್ತಿಯ ಮನೆಯ ಬದಲಾಗಿ , ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಿ , ಆ ಭಾಗದಲ್ಲಿನ ಸಾರ್ವಜನಿಕರನ್ನು ವ್ಯಾಪಕವಾಗಿ ಪರೀಕ್ಷೆಗೆ ಒಳಪಡಿಸಬೇಕು, ಜಿಲ್ಲೆಯಲ್ಲಿ ಪ್ರತಿದಿನ 650 ಮಂದಿಯ ಸ್ಯಾಂಪಲ್ ಪರೀಕ್ಷೆ ನಡೆಸುವಂತೆ ನಿರ್ದೇಶನವಿದ್ದು, ಜಿಲ್ಲೆಯ ಒಂದೇ ಬಾಗದಲ್ಲಿ ಸ್ಯಾಂಪಲ್ ತೆಗೆಯದೇ , ಜಿಲ್ಲೆಯಾದ್ಯಂತ ವಿವಿಧ ವರ್ಗಗಳಿಗೆ ಸೇರಿದ ಸಾರ್ವಜನಿಕರ ಸ್ಯಾಂಪಲ್ ತೆಗದು ಪರೀಕ್ಷೆ ನೆಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.ಜಿಲ್ಲೆಯಲ್ಲಿ ಕೋವಿಡ್ ವಾರಿರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯುತ್ತಿದ್ದು, ಇಂತಹ ಕಾರ್ಯಕ್ರಮಗಳಲ್ಲಿ ಯಾವುದೇ ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ,ಇನ್ನು ಮುಂದೆ ಇಂತಹ ಸನ್ಮಾನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಿಬ್ಬಂದಿಗಳಿಗೆ ಹಾಗೂ ಇಂತಹ ಕಾರ್ಯಕ್ರಮ ಆಯೋಜಿಸುವ ಸ್ವಯಂ ಸಂಸ್ಥೆಗಳು ಮತ್ತು ಆಯೋಜಕರ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಕೋವಿಡ್ ನಿಯಂತ್ರಣ ನಿಯಮಗಳನ್ವಯ ಈ ರೀತಿಯ ಯಾವುದೇ ಸಮಾರಂಭಗಳನ್ನು ನಡೆಸುವುದಕ್ಕೆ ಅನುಮತಿ ಇಲ್ಲ , ಕೋವಿಡ್ ವಿರುದ್ದದ ನಿಜವಾದ ಹೋರಾಟ ಈಗ ಆರಂಭವಾಗಿದೆ, ಸನ್ಮಾನ ಕಾರ್ಯಕ್ರಮ ಮಾಡಿಕೊಂಡು ಮರೆಯುವ ಗಳಿಗೆ ಇದಲ್ಲ, ಕೊರೋನಾ ಮುಗಿದ ನಂತರ ಪ್ರತಿಯೊಬ್ಬರಿಗೂ ಜಿಲ್ಲಾಡಳಿತದಿಂದಲೇ ಸನ್ಮಾನ ಆಯೋಜಿಸಲಾಗುವುದು ಎಂದರು.ಜಿಲ್ಲೆಯಲ್ಲಿ ಕೋವಿಡ್ ನಿಂದ ಮರಣ ಸಂಭವಿಸಿದಲ್ಲಿ , ಶವಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ರಚಿಸಲಾಗಿರುವ ತಂಡವು, ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳಲ್ಲಿ ನಿಗಧಿತ ಜಾಗ ಗುರುತಿಸಿರುವಂತೆ ಹಾಗೂ ನಿಯಮಗಳನ್ವಯ ಯಾವುದೇ ಲೋಪವಾಗದಂತೆ ಶವ ಸಂಸ್ಕಾರ ನಡೆಸುವಂತೆ ತಿಳಿಸಿದರು.ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ತಂಡಗಳಿಗೆ , ಸಂದರ್ಭಗಳಿಗೆ ತಕ್ಕಂತೆ ಸ್ವಯಂ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರ ನೀಡಿದ್ದು, ಯಾವುದೇ ಸಂದರ್ಭದಲ್ಲಿ ಲೋಪಗಳಾದಲ್ಲಿ ಸಂಬ0ದಪಟ್ಟ ತಂಡ ಮುಖ್ಯಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ 14 ತಂಡಗಳ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
