ಕುಂದಾಪುರ(ವಿಶ್ವಕನ್ನಡಿಗ ನ್ಯೂಸ್): ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟುಹೋದ ಘಟನೆ ತಾಲೊಕಿನ ಗಂಗೊಳ್ಳಿ ನಡೆದಿದೆ.ಜಿ. ದಿನೇಶ್ ನಾಯಕ್ ಹಾಗೂ ಜಿ. ಪದ್ಮನಾಭ್ ನಾಯಕ್ ಅವರ ಅಂಗಡಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಎರಡೂ ಅಂಗಡಿಗಳು ಸಂಪೂರ್ಣ ಸುಟ್ಟು ಹೋಗಿದೆ. 20 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.ಇಂದು ಬೆಳಗ್ಗಿನ ಜಾವ 3 ಸುಮಾರಿಗೆ ದುರ್ಘಟನೆ ನಡೆದಿದ್ದು, 3.40 ರ ಸುಮಾರಿಗೆ ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ, ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು.
