ಕುಂದಾಪುರ,(ವಿಶ್ವ ಕನ್ನಡಿಗ ನ್ಯೂಸ್):ಇಲ್ಲಿನ ಕೆಎಸ್ಆರ್ಟಿಸಿ ಬಸ್ ಚಾಲಕರು ನಿರ್ವಾಹಕರ ಗಂಟಲ ದ್ರವದ ಪರೀಕ್ಷೆಗಳನ್ನು ಮಾಡಲಾಗಿದ್ದು, ಸೋಮವಾರ ಮೂವರು ಚಾಲಕರಿಗೆ ಕೋವಿಡ್ ಸೋಂಕು ಇರುವುದು ದೃಢವಾಗಿದೆ.ಮೂವರು ಕೂಡ ಕುಂದಾಪುರದಿಂದ ಹೊರ ಜಿಲ್ಲೆಗಳಿಗೆ ಸಂಚರಿಸುವ ಬಸ್ಗಳ ಚಾಲಕರಾಗಿದ್ದರು.ಗುರುವಾರ ಕುಂದಾಪುರದಲ್ಲಿರುವ ಕೆಎಸ್ಆರ್ಟಿಸಿ ಡಿಪೋದ ಸಿಬಂದಿ, ಬಸ್ ಚಾಲಕರು, ನಿರ್ವಾಹಕರ ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ಬಂದಿದ್ದು, ಅದರಲ್ಲಿ ಮೂವರಿಗೆ ಪಾಸಿಟಿವ್ ಬಂದಿದೆ.
ಇದು ದಮನಿತರ ಧ್ವನಿ