ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಸುಳ್ಯ ತಾಲೂಕು ಸರಕಾರಿ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಹಾಗೂ ದಾಖಲಾಗಿದ್ದ ರೋಗಿಗಳಿಗೆ ಕೋವಿಡ್-19 ಪಾಸಿಟಿವ್ ಬಂದಿರುವ ಕಾರಣದಿಂದ ಆಸ್ಪತ್ರೆಯು ಸೀಲ್ ಡೌನ್ ಆಗಿದ್ದು, ಸರಕಾರಿ ಆಸ್ಪತ್ರೆಯನ್ನೇ ಅವಲಂಬಿಸಿದ್ದ ಸುಮಾರು 34ರಷ್ಟು ಡಯಾಲಿಸೀಸ್ ಮಾಡಬೇಕಾದ ರೋಗಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ವ್ಯವಸ್ಥೆಗಳಿದ್ದರೂ ಖರ್ಚು ಭರಿಸಲು ಅಶಕ್ತರಾಗಿರುವ ರೋಗಿಗಳಿಗೆ ತಕ್ಷಣ ಸೂಕ್ತ ಬದಲಿ ವ್ಯವಸ್ಥೆ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(ಎಸ್.ಎಸ್.ಎಫ್) ಸುಳ್ಯ ಡಿವಿಷನ್ ಸಮಿತಿ ವತಿಯಿಂದ ಜುಲೈ ೯ರಂದು ತಾಲೂಕು ಆರೋಗ್ಯಾಧಿಕಾರಿಯವರಿಗೆ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಚಂದ್ರಾವತಿ ಯವರ ಮುಖಾಂತರ ಮನವಿ ಸಲ್ಲಿಸಲಾಯಿತು.
ಎಸ್.ಎಸ್.ಎಫ್ ಸುಳ್ಯ ಡಿವಿಷನ್ ಉಪಾಧ್ಯಕ್ಷ ಫೈಝಲ್ ಝುಹ್ರಿ ಕಲ್ಲುಗುಂಡಿ, ದ.ಕ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿ ಸಿದ್ದೀಖ್ ಗೂನಡ್ಕ, ಕೆ.ಸಿ.ಎಫ್ ನಾಯಕ ಕಬೀರ್ ಜಟ್ಟಿಪ್ಪಳ್ಳ, ಸುಳ್ಯ ಸೆಕ್ಟರ್ ಅಧ್ಯಕ್ಷ ಸ್ವಬಾಹ್ ಹಿಮಮಿ ಸಖಾಫಿ ಬೀಜಕೊಚ್ಚಿ ನಿಯೋಗದಲ್ಲಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.