ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಕೋವಿಡ್-19 ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನಲೆ ರಾಜ್ಯದ ಮುಖ್ಯಮಂತ್ರಿಗಳ ನಿರ್ದೇಶನದಂತೆ ಜುಲೈ 16 ಗುರುವಾರದಿಂದ ಒಂದು ವಾರ ಜಿಲ್ಲೆಯಾದ್ಯಂತ ಲಾಕ್ ಡೌನ್ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳೊಂದಿಗೆ ನಡೆದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಸಂಸದ ನಳಿನ ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿ ಜತೆಯಲ್ಲಿ ನಡೆದ ಚರ್ಚೆಯಲ್ಲಿ ಲಾಕ್ ಡೌನ್ ಬಗ್ಗೆ ಜಿಲ್ಲಾಡಳಿತ ನಿರ್ಧಾರ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಕೊರೋನ ಸೋಂಕು ತೀವ್ರಗೊಳ್ಳುತ್ತಿರುವುದರಿಂದ ಗುರುವಾರದಿಂದ ಲಾಕ್ ಡೌನ್ ಆಗಲಿದ್ದು ಮುಂಚಿತವಾಗಿ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀಧಿಸಿಟ್ಟುಕೊಳ್ಳಬೇಕು ಹಾಗೂ ಎಲ್ಲರೂ ಸಹಕಾರ ನೀಡಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.