ಪರಿಸರವನ್ನು ಸಂರಕ್ಷಿಸಿ ಪ್ರಕೃತಿ ವಿಕೋಪಗಳು ತಪ್ಪಿಸಿ: ಬಿ.ಎಂ.ವೆಂಕಟರೆಡ್ಡಿ


ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಜಗತ್ತಿನಲ್ಲಿ ಕೊರೊನಾ ಸೋಂಕಿನಿಂದ ಜನ ಸಂಕಷ್ಟದಲ್ಲಿ ಸಿಲುಕಿದ್ದಾರೆ ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬರು ಕೈಯಲ್ಲಿ ಸಾಧ್ಯವಾದಷ್ಟು ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕೆಂದು ತಾಲೂಕಿನ ಮಳ್ಳೂರು ಎಸ್.ಎಫ್.ಸಿ.ಎಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಬಿ.ಎಂ.ವೆಂಕಟರೆಡ್ಡಿ ಕರೆ ನೀಡಿದರು.

ತಾಲೂಕಿನ ಮೇಲೂರು-ಮುತ್ತೂರು ರಸ್ತೆಯಲ್ಲಿ ಪರಿಸರ ಸಂರಕ್ಷಣೆ ಮಾಡಲು ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮನುಷ್ಯ ತನ್ನ ಸ್ವಾರ್ಥ ಸಾಧನೆಗಾಗಿ ಪ್ರಕೃತಿಯ ಸೌಂದರ್ಯವನ್ನು ನಾಶ ಮಾಡುತ್ತಿದ್ದಾನೆ ಗಿಡ-ಮರಗಳನ್ನು ಕಡಿದು ಅರಣ್ಯ ಸಂಪತ್ತು ನಾಶ ಮಾಡುತ್ತಿರುವ ಫಲದಿಂದಾಗಿ ನಾವೆಲ್ಲರು ಅನೇಕ ರೀತಿಯ ಕಷ್ಟಗಳನ್ನು ಎದುರಿಸುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.


ಸೃಷ್ಟಿ ರಸಗೊಬ್ಬರ ಕಂಪನಿಯ ನಾಗರಾಜ್ ಮಾತನಾಡಿ ಜಿಲ್ಲೆಯಲ್ಲಿ ಅಂರ್ತಜಲಮಟ್ಟ ಕುಸಿದು ಫ್ಲೋರೈಡ್ ಮಿಶ್ರಿತ ನೀರು ಸೇವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಪ್ರತಿಯೊಬ್ಬರು ಮನೆಯಂಗಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಪರಿಸರವನ್ನು ಸಂರಕ್ಷಣೆ ಮಾಡಲು ಧೃಡ ಸಂಕಲ್ಪ ಮಾಡಬೇಕೆಂದರು.


ನಂದಿ ಗಿರಿಧಾಮದ ವಿಶೇಷ ಕರ್ತವ್ಯಾಧಿಕಾರಿ ಗೋಪಾಲ್ ಮಾತನಾಡಿ ಪ್ರಕೃತಿಯನ್ನು ಉಳಿಸಿದರೆ ನಾವು ಉಳಿಯುತ್ತೇವೆ ಇಲ್ಲದಿದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಆಕ್ಸೆಜನ್ ಸಹ ಖರೀದಿ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಸಿದ ಗಿಡ ನೆಡುವುದರಿಂದ ಪರಿಸರವನ್ನು ಸಂರಕ್ಷಣೆ ಮಾಡಲು ಸಾಧ್ಯವಿಲ್ಲ ಅದನ್ನು ಪೋಷಣೆ ಮಾಡಿ ಗಿಡವನ್ನು ಉಳಿಸುವ ಪ್ರಯತ್ನ ಮಾಡಬೇಕೆಂದು ಪರಿಸರ ಸಂರಕ್ಷಣೆ ಮಾಡಲು ಯುವ ಸಮೂಹ ಮತ್ತು ವಿದ್ಯಾರ್ಥಿಗಳಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು.

ಕಾಂಗ್ರೇಸ್ ಮುಖಂಡ ಎನ್.ಶ್ರೀನಿವಾಸ್ ಮಾತನಾಡಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಒಂದು ಆಂದೋಲನವಾಗಬೇಕು ಪ್ರತಿಯೊಂದು ಮನೆಯಲ್ಲಿ ಪರಿಸರದ ಬಗ್ಗೆ ಸ್ವಯಂ ಜಾಗೃತಿ ಬಂದಾಗ ಮಾತ್ರ ಅಭಿಯಾನ ಯಶಸ್ವಿಯಾಗುತ್ತದೆ ಈ ನಿಟ್ಟಿನಲ್ಲಿ ಸಮಾನ ಮನಸ್ಕರು ಪ್ರಕೃತಿಯ ಬಗ್ಗೆ ವಿಶೇಷ ಕಾಳಜಿವಹಿಸಿ ಪರಿಸರವನ್ನು ಸಂರಕ್ಷಣೆ ಮಾಡಲು ಮುಂದಾಗಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸುಮಾರು 150ಕ್ಕೂ ಅಧಿಕ ಗಿಡಗಳನ್ನು ನೆಟ್ಟರು ಚಿಕ್ಕಬಳ್ಳಾಪುರದ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ

ವರದಿಗಾರರು,
ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...