ಮಂಗಳೂರು (www.vknews.com) : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ದಿನಾಂಕ 19.12.2019ರಂದು ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಗುಂಡೇಟಿನಿಂದ ಶ್ರೀ ನೌಶಿನ್ ಹಾಗೂ ಶ್ರೀ ಜಲೀಲ್ ಕುದ್ರೋಳಿ ಎಂಬವರು ಮೃತಪಟ್ಟಿರುವ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ, ಉಡುಪಿ ಇವರನ್ನು ಸರಕಾರದ ಆದೇಶ ಸಂಖ್ಯೆ ಹೆಚ್ಡಿ 5 ಪಿಸಿಇ 2019, ಬೆಂಗಳೂರು ದಿನಾಂಕ 23/12/2019 ಇದರಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿರುತ್ತದೆ.
ಈ ಸಂಬಂಧ ಸದ್ರಿ ದಿನ ಈ ಘಟನೆ ಬಗ್ಗೆ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾವುದೇ ವ್ಯಕ್ತಿಗಳು ದಿನಾಂಕ 11.08.2020 ರಂದು ಪೂರ್ವಾಹ್ನ 11 ಗಂಟೆಯಿಂದ ಅಪರಾಹ್ನ 1 ಗಂಟೆವರೆಗೆ ಸಹಾಯಕ ಆಯುಕ್ತರ ಕೋರ್ಟ್ ಹಾಲ್, ಮಿನಿ ವಿಧಾನಸೌಧ, ಮಂಗಳೂರು, ಇಲ್ಲಿ ತನ್ನ ಸಮಕ್ಷಮ ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅಂತಿಮ ಅವಕಾಶವನ್ನು ನೀಡಲಾಗಿದೆ. ತದನಂತರ ಸಾರ್ವಜನಿಕರಿಂದ ಯಾವುದೇ ಸಾಕ್ಷ್ಯ ಅಥವಾ ಹೇಳಿಕೆಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಉಡುಪಿ ಜಿಲ್ಲಾ ಡಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ ಅವರ ಪ್ರಕಟಣೆ ತಿಳಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.