ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಸುರಭಿ ಶೆಟ್ಟಿಯವರು ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ.ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ . ಬೈಂದೂರು ತಾಲೂಕಿನ ಕಿರಿಮಂಜೇಶ್ವರದ ಸಾಂದೀಪನಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾದ ಇವಳು 625ಕ್ಕೆ 624 ಅಂಕಗಳನ್ನು ಪಡೆದಿದ್ದಾಳೆ.ಫಲಿತಾಂಶ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸುರಭಿ, 624 ಅಂಕ ಬರುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಸಮಾಜ ವಿಜ್ಞಾನದಲ್ಲಿ 1 ಅಂಕ ಕಳೆದುಕೊಂಡಿದ್ದೇನೆ. ಮರು ಮೌಲ್ಯಮಾಪನಾ ಅರ್ಜಿ ಹಾಕುತ್ತೇನೆ. ಎಂದರು . ಉಪ್ಪುಂದದ ನಿವಾಸಿಯಾಗಿರುವ ಸುರೇಶ್ ಶೆಟ್ಟಿ ಮತ್ತು ಸೀಮಾ ಸುರೇಶ್ ಶೆಟ್ಟಿ ದಂಪತಿಗಳ ಪುತ್ರಿಯಾಗಿರುವ ಇವರು ಮಂಗಳೂರಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ಶಿಕ್ಷಣ ಮುಂದುವರಿಸಲಿದ್ದು, ವೈದ್ಯಕೀಯ ಶಿಕ್ಷಣದಲ್ಲಿ ಆಸಕ್ತಿಯಿದೆ ಎನ್ನುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.