ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿಯು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಪುತ್ತೂರಿನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲಾಧ್ಯಕ್ಷರಾದ ರಿಯಾಝ್ ಅಂಕತಡ್ಕ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಸಮಿತಿ ಸದಸ್ಯರಾದ ಮಿಸ್ರಿಯಾ ಪುತ್ತೂರು ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.
ಈ ಸಂಧರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾದ ಅಫ್ರೀದ್ ಕೂರ್ನಡ್ಕ, ಸದಸ್ಯರಾದ ಸಬೀರ್, ಬಾತಿಷ್, ಸಪ್ವಾನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಅನ್ಸಾರ್ ಬೆಳ್ಳಾರೆ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.