(www.vknews.com) : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೋಳಂತೂರು* ಗ್ರಾಮ ಸಮಿತಿ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಆಯುಷ್ಮಾನ್ ಆರೋಗ್ಯ ಕಾರ್ಡ್” ನೋಂದಣಿ ಅಭಿಯಾನ ಕಾರ್ಯಕ್ರಮವು ಇಂದು ಎಸ್.ಡಿ.ಪಿ.ಐ ಬೋಳಂತೂರು ಕಛೇರಿಯಲ್ಲಿ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ 300 ಕ್ಕಿಂತ ಹೆಚ್ಚು ಫಲಾನುಭವಿಗಳು ಪ್ರಯೋಜನವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಬೋಳಂತೂರು ಗ್ರಾಮ ಸಮಿತಿ ಅಧ್ಯಕ್ಷರಾದ ಮುಹಮ್ಮದ್ ಮಾಡದ ಬಳಿ, ಕಾರ್ಯದರ್ಶಿಯಾದ ನವಾಝ್ ಬೋಳಂತೂರು, ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಕುಕ್ಕಾಜೆ ವಲಯ ಅಧ್ಯಕ್ಷರಾದ ಶಾಹುಲ್ ಹಮೀದ್ ಬೋಳಂತೂರು,ಎಸ್.ಡಿ.ಪಿ.ಐ ಗ್ರಾಮ ಸಮಿತಿ ಸದಸ್ಯರಾದ ಫಾರೂಕ್ ಮುರ, ಮುಸ್ತಪ ಬೋಳಂತೂರು, ಫಾರೂಕ್ ಸಾಲೆತ್ತೂರು, ಪೈರೋಝ್ ಬೋಳಂತೂರು, ಅಶ್ರಫ್ ಬೋಳಂತೂರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.