ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಬಂಟ್ವಾಳ ತಾಲೂಕು ಕಚೇರಿಯಲ್ಲಿ ಆಧಾರ್ ಕಾರ್ಡ್ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ದೂರಿಕೊಂಡ ಹಿನ್ನಲೆಯಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರು ಬುಧವಾರ ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಸ್ಯೆ ಪರಿಹಾರದ ಬಗ್ಗೆ ಮಾತುಕತೆ ನಡೆಸಿದರು. ಈ ಸಂದರ್ಭ ಮಾಜಿ ಸಚಿವರೊಂದಿಗೆ ಮಾತುಕತೆ ನಡೆಸಿದ ಅಧಿಕಾರಿಗಳು ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್, ಕೋಶಾಧಿಕಾರಿ ತಿಲಕ್ ಪೂಜಾರಿ, ಭೂಅಭಿವೃದ್ದಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್ ಮೊದಲಾದವರು ಜೊತೆಗಿದ್ದರು.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.