ಬಂಟ್ವಾಳ : ಕಾಂಗ್ರೆಸ್ ಚುನಾವಣಾ ಪೂರ್ವಸಿದ್ದತೆ ಸಭೆ

ಬಂಟ್ವಾಳ, ಸೆ. 26, 2020 (ವಿಶ್ವಕನ್ನಡಿಗ ನ್ಯೂಸ್) : ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರ ಸಭೆ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ಸಿದ್ಧತೆ ಹಾಗೂ ಪಕ್ಷದ ಚಟುವಟಿಕೆ ಬಗ್ಗೆ ಚರ್ಚಿಸಲಾಯಿತು. ಮಾಜಿ ಸಚಿವ ಬಿ ರಮಾನಾಥ ರೈ ಅವರ ಮಾರ್ಗದರ್ಶನದಂತೆ ಚುನಾವಣೆಗೆ ಸಿದ್ದರಾಗವಂತೆ ಕಾರ್ಯಕರ್ತರಿಗೆ ತಿಳಿಸಲಾಯಿತು. ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಸದಾನಂದ ಕುಲಾಲ್ ರಾಯಿ, ಪರಿಶಿಷ್ಟ ಜಾತಿ ಸಮಿತಿ ಅಧ್ಯಕ್ಷ ಗಂಗಯ್ಯ ಬಿ.ಎನ್., ಅಲ್ಪ ಸಂಖ್ಯಾತ ವರ್ಗದ ಅಧ್ಯಕ್ಷ ಮೊಹಮ್ಮದ್ ಸಂಗಬೆಟ್ಟು, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಜಗದೀಶ್ ಕೊಯಿಲ, ಮಾಣಿಕ್ಯ ರಾಜ್ ಜೈನ್, ಪ್ರದಾನ ಕಾರ್ಯದರ್ಶಿಗಳಾದ ಮಹಾಬಲ ಬಂಗೇರ, ಗುರುಪ್ರಸಾದ್ ಶೆಟ್ಟಿ, ರವಿ ಪೂಜಾರಿ ಪಂಜಿಕಲ್ಲು, ವಿಶ್ವನಾಥ್ ಗೌಡ ಮಣಿ, ಉಮೇಶ್ ಕುಲಾಲ್ ನಾವೂರು, ರಿಚರ್ಡ್ ಮೇನೇಜಸ್ ಅಮ್ಟಾಡಿ, ಕೋಶಾಧಿಕಾರಿ ತಿಲಕ್ ಪೂಜಾರಿ ಸುದೇಕಾರ್, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಸುರೇಶ್ ಪೂಜಾರಿ ಪಂಜಿಕಲ್ಲು ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಧಾನ ವರದಿಗಾರರು,
ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...