ಪತ್ರಕರ್ತನನ್ನು ಪ್ರಶ್ನಿಸಬಾರದೆಂದೇನಿಲ್ಲ,ಅರ್ನಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್


ದೆಹಲಿ(ವಿಶ್ವ ಕನ್ನಡಿಗ ನ್ಯೂಸ್): ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧದ ತನಿಖೆಗೆ ಬಾಂಬೆ ಹೈಕೋರ್ಟ್ ನೀಡಿದ್ದ ತಡೆಯನ್ನು ಪ್ರಶ್ನಿಸಿ ಮಹರಾಷ್ಟ್ರ ಸರ್ಕಾರ ನೀಡಿದ್ದ ಮೇಲ್ಮನವಿಯನ್ನು ಆಲಿಸುತ್ತಿದ್ದ ಸುಪ್ರೀಂಕೋರ್ಟ್, ಪತ್ರಿಕಾ ಸ್ವಾತಂತ್ರ್ಯ ಎಂದರೆ ಪತ್ರಕರ್ತನನ್ನು ಪ್ರಶ್ನಿಸಬಾರದು ಎಂದರ್ಥವಲ್ಲ ಎಂದು ತಿಳಿಸಿದೆ.

ಲಾಕ್‌ಡೌನ್ ಸಮಯದಲ್ಲಿ ಪಾಲ್ಘರ್ ಗುಂಪುಹತ್ಯೆ ಮತ್ತು ಬಾಂದ್ರಾ ಬಸ್ ನಿಲ್ದಾಣದಲ್ಲಿ ವಲಸೆ ಕಾರ್ಮಿಕರು ಗುಂಪು ಸೇರಿದ್ದ ಘಟನೆಯನ್ನು ಕೋಮು ದ್ವೇಷ ಹರಡಲು ಪ್ರಚೋದಿಸಿದ ಆರೋಪದಲ್ಲಿ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಎರಡು ಎಫ್ಐಆರ್ ಅನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದ್ದು,ರಿಪಬ್ಲಿಕ್ ಟಿವಿ ಕಾರ್ಯಕ್ರಮಗಳನ್ನು ಪ್ರಶ್ನಿಸಿ ನ್ಯಾಯಾಲಯ ಹತ್ತಿದ ಮಹಾರಾಷ್ಟ್ರ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ ಹಾಜರಾದರು.

ತನಿಖೆ ಪುನಃ ಪ್ರಾರಂಭವಾದರೆ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದ ಅವರು, ”ಕೆಲವು ಜನರು ಕಾನೂನಿಗಿಂತ ಮೇಲಿದ್ದಾರೆ ಎಂದು ಸಂದೇಶವು ಹೋಗಬಾರದು” ಎಂದು ಸೂಕ್ಷ್ಮವಾಗಿ ಹೇಳಿದ್ದಾಗಿ ವದರಿಯಾಗಿದೆ.ಸಿಂಘ್ವಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೊಬ್ಡೆ, ಕಾನೂನಿನ ಮೇಲೆ ಯಾರೂ ಇರದಿದ್ದರೂ, ಕೆಲವು ಸಂದರ್ಭಗಳಲ್ಲಿ ಜನರನ್ನು ಗುರಿಯಾಗಿಸಲಾಗುತ್ತದೆ,ಆದರೆ ಈ ಸಮಯದಲ್ಲಿ ಅವರಿಗೆ ಹೆಚ್ಚಿನ ಮಟ್ಟದ ರಕ್ಷಣೆ ನೀಡುವ ಸಂಪ್ರದಾಯ ಇದೆ ಎಂದು ಹೇಳಿದರು.

ಸಂಪಾದಕರು,
ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...