ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ –ಅರ್ಜಿ ಆಹ್ವಾನ
ಮಂಗಳೂರು (www.vknews.com) : ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ರು ಮತ್ತು ಪಾರ್ಸಿ ಜನಾಂಗದವರಿಂದ ಪ್ರಸ್ತುತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್ಲೈನ್ http://kmdc.kar.nic.in/loan ನಲ್ಲಿ ಸಲ್ಲಿಸಲು ಡಿಸೆಂಬರ್ 10 ಮತ್ತು ದಾಖಲಾತಿಗಳೊಂದಿಗೆ ಅರ್ಜಿಯನ್ನು ಜಿಲ್ಲಾ ಕಛೇರಿಗೆ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನವಾಗಿರುತ್ತದೆ. ನಿಗಮದ ಎಲ್ಲಾ ಯೋಜನೆಗಳಲ್ಲಿ ಅಂಗವಿಕಲರಿಗೆ ಹಾಗೂ ಮಾಜಿ ಸೈನಿಕರಿಗೆ ಮೀಸಲಾತಿ ಇರುತ್ತದೆ.
ಅರ್ಜಿದಾರರು ಆನ್ ಲೈನ್ ಅರ್ಜಿಯ ಹಾರ್ಡ್ ಕಾಪಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), “ಮೌಲಾನಾ ಆಝಾದ್ ಭವನ” 2ನೇ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ದ.ಕ ಜಿಲ್ಲೆ, ಮಂಗಳೂರು ಕಛೇರಿಗೆ ಸಲ್ಲಿಸಬೇಕು ಎಂದು ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಲ ಯೋಜನೆ
ಅಲ್ಪಸಂಖ್ಯಾತ ಸಮುದಾಯ ನಿಗಮದಿಂದ ಕೋವಿಡ್ನಿಂದ ಆರ್ಥಿಕ ತೊಂದರೆ ಅನುಭವಿಸುತ್ತಿರುವ ಅಲ್ಪಸಂಖ್ಯಾತ ಮಹಿಳೆಯರಿಂದ ನಿಗಮದ ವೆಬ್ಸೈಟ್ http://kmdcmicro.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯಾವುದೇ ಯೋಜನೆಯಲ್ಲೂ ಇದುವರೆಗೆ ಸಾಲ, ಸಹಾಯಧನ ಪಡೆಯದ ಕೋವಿಡ್-19ರ ಪಿಡುಗಿನಿಂದಾಗಿ ತೊಂದರೆಗೊಳಗಾದ ಅಂತ್ಯೋದಯ/ ಬಿಪಿಎಲ್ ಕಾರ್ಡ್ ಹೊಂದಿರುವ 25 ರಿಂದ 50 ವಯೋಮಾನದೊಳಗಿನ ಮಹಿಳೆಯರಿಗೆ ತಳ್ಳುವ ಗಾಡಿಯಲ್ಲಿ ವ್ಯಾಪಾರ, ಬೀದಿ ವ್ಯಾಪಾರ, ಜಾತ್ರೆಗಳಲ್ಲಿ ವ್ಯಾಪಾರ, ಕಿರಾಣಿ ಅಂಗಡಿ, ಅರಿಷಿನ/ ಕುಂಕುಮ/ ಅಗರಬತ್ತಿ/ ಕರ್ಪೂರ, ಪಾದಚಾರಿ ಮಾರ್ಗದಲ್ಲಿ ಟೀ/ಕಾಫಿ ಮಾರಾಟ, ಎಳನೀರು ವ್ಯಾಪಾರ, ಹೂವಿನ ವ್ಯಾಪಾರ, ತರಕಾರಿ ವ್ಯಾಪಾರ, ಹಣ್ಣಿನ ವ್ಯಾಪಾರ, ಇನ್ನಿತರ ಸಣ್ಣ ವ್ಯಾಪಾರ ನಡೆಸಲು ಆರಂಭಿಕ ಬಂಡವಾಳಕ್ಕಾಗಿ ರೂ.10,000/- ಮೊತ್ತದ ಅಲ್ಪಾವಧಿ ಸಾಲ ನೀಡಲಾಗುತ್ತದೆ ಎಂದು ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಸ್ನಾತಕೋತ್ತರ ಪ್ರವೇಶಾತಿ –ಅವಧಿವಿಸ್ತರಣೆ
ಪ್ರಸ್ತುತ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳು/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು/ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು/ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಾಪ್ಪ ಕಾಲೇಜು, ಮಡಿಕೇರಿ/ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳ (ಸರಕಾರಿ ಕೋಟದ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳು ಇಲ್ಲಿ ನಡೆಸಲ್ಪಡುವ ವಿವಿಧ ಸ್ನಾತಕೋತ್ತರ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 16 ರ ವರೆಗೆ ವಿಸ್ತರಿಸಲಾಗಿದೆ. ಪಿ.ಜಿ. ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕಾರ್ಯಕ್ರಮಗಳ ಭರ್ತಿ ಮಾಡಿದ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಪ್ರವೇಶ ಪರೀಕ್ಷೆ ಹಾಗೂ ಹೆಚ್ಚಿನ ಮಾಹಿತಿಗಳನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್ಸೈಟ್ http://www.mangaloreuniversity.ac.in ಸಂಪರ್ಕಿಸುವಂತೆ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಪ್ರವಾಸ
ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ರವರು ನವೆಂಬರ 14 ಮತ್ತು 15ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ನವೆಂಬರ್14 ರಂದು ಸಂಜೆ 7 ಕ್ಕೆ ವಿಮಾನದಮೂಲಕ ಮಂಗಳೂರಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದಾರೆ.ನವೆಂಬರ್ 15 ರಂದು ಬೆಳಿಗ್ಗೆ 10 ಕ್ಕೆ ಮಂಗಳೂರಿನ ಕೊಡಿಯಾಲ್ ಬೈಲ್ ಟಿ.ವಿ ರಮಣ ಪೈ ಕನ್ವೆನ್ಷನ್ ಹಾಲ್ ನಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕೋರೋನೋತ್ತರ ಸಹಕಾರ ಸಂಸ್ಥೆಗಳ ಜವಾಬ್ದಾರಿ ಮತ್ತು ಪಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಕುಲಶೇಖರ ಜಿಲ್ಲಾ ಸಹಕಾರ ಹಾಲು ಒಕ್ಕೂಟಕ್ಕೆ ಭೇಟಿ ನೀಡಿ ಪರಿಶೀಲನೆ ಹಾಗೂ 3.30ಕ್ಕೆ ಬೈಕಂಪಾಡಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ವಿಶೇಷ ಕರ್ತವ್ಯಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರುಕಟ್ಟೆ ಮೌಲ್ಯ- ಸಾರ್ವಜನಿಕರ ಆಕ್ಷೇಪಣೆ ಸಲ್ಲಿಸಲು ಅವಕಾಶ
ಉಪನೊಂದಣಿ ಕಚೇರಿ, ಮಂಗಳೂರು ತಾಲೂಕು ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿಯ ಪ್ರಸಕ್ತ ಸಾಲಿನಲ್ಲಿ ಹೊಸ ಹಾಗೂ ಹಳೆಯ ಅಪಾರ್ಟ್ಮೆಂಟ್ಗಳ ಮಾರುಕಟ್ಟೆ ಮೌಲ್ಯವನ್ನು ನಿಗಧಿಪಡಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಈಗಾಗಲೇ ಪ್ರಕಟಣೆಗೊಳಿಸಲಾಗಿದ್ದು ಸಾರ್ವಜನಿಕರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ 15 ದಿವಸದೊಳಗೆ ಸಲ್ಲಿಸಬೇಕೆಂದು ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿ, ಸದಸ್ಯ ಕಾರ್ಯದರ್ಶಿ ಹಾಗೂ ಉಪನೋಂದಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಕ್ತಿನಗರ ಮುಖ್ಯ ರಸ್ತೆಯ ಮಹಾಕಾಳಿ ಜಂಕ್ಷನ್ ನಿಂದ ವಾಹನ ಸಂಚಾರ ನಿಷೇಧಿಸಿ ತಾತ್ಕಾಲಿಕ ಬದಲಾವಣೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪದವು ಸೆಂಟ್ರಲ್ 35ನೇ ವಾರ್ಡ್ ಶಕ್ತಿನಗರ ಮುಖ್ಯ ರಸ್ತೆಯ ಮಹಾಕಾಳಿ ಜಂಕ್ಷನ್ ನಿಂದ ಶಕ್ತಿನಗರ ಸ್ಮಶಾನ ದ್ವಾರದವರೆಗೆ 250.00 ಮೀ. ಉದ್ದಕ್ಕೆ ರಸ್ತೆ ಅಭಿವೃದ್ಧಿಪಡಿಸಿ ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಯನ್ನು ಪ್ರಾರಂಭಿಸಲು ಬದಲಿ ಮಾರ್ಗದ ವ್ಯವಸ್ಥೆ ಮಾಡಿ ಮಂಗಳೂರು ಪೊಲೀಸ್ ಆಯುಕ್ತರು ಹಾಗೂ ಅಡಿಷನಲ್ ಡಿಸ್ಟ್ರೀಕ್ಟ್ ಮೆಜಿಸ್ಟ್ರೇಟ್ ವಿಕಾಶ್ ಕುಮಾರ್ ವಿಕಾಶ್ ಆದೇಶ ಹೊರಡಿಸಿದ್ದಾರೆ.
ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಾವಳಿಗಳು 1989 ರ ನಿಯಮ 221 ರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಶಕ್ತಿನಗರ ಮುಖ್ಯ ರಸ್ತೆ ಮಹಾಕಾಳಿ ಜಂಕ್ಷನ್ ನಿಂದ ಶಕ್ತಿನಗರ ಸ್ಮಶಾನ ದ್ವಾರದವರೆಗೆ ಪ್ರಸ್ತುತ ಸಾಲಿನನವೆಂಬರ್ 12 ರಿಂದ 2021ನೇ ಸಾಲಿನ ಜನವರಿ 10 ರವರೆಗೆ ವಾಹನಗಳ ಸಂಚಾರದಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.
ಶಕ್ತಿನಗರ ಕ್ರಾಸ್ ನಿಂದ ಸ್ಮಶಾನ ರಸ್ತೆಯಾಗಿ ಕಂಡೆಟ್ಟು ಬಿಕರ್ನಕಟ್ಟೆ ಕ್ರಾಸ್ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳನ್ನು ಶಕ್ತಿನಗರ ಸ್ಮಶಾನದ ಬಳಿ ನಿμÉೀಧಿಸಲಾಗಿದೆ.ಬಿಕರ್ನಕಟ್ಟೆ ಕ್ರಾಸ್, ಕಂಡೆಟ್ಟು ಪಾಂಡುರಂಗ ಭಜನಾ ಮಂದಿರದಿಂದ ಸ್ಮಶಾನ ರಸ್ತೆಯಾಗಿ ಶಕ್ತಿನಗರ ಕ್ರಾಸ್ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳಿಗೆ ಅವಕಾಶ ನೀಡಿ ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.ಮೇಲಿನ ಈ ನಿಬರ್ಂಧನೆಗಳು, ಪೆÇಲೀಸ್ ವಾಹನಗಳು ಹಾಗೂ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲಎಂದು ಮಂಗಳೂರುಪೆÇಲೀಸು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 18 ರಂದು ಕೆ.ಎಂ.ಎಫ್. ವತಿಯಿಂದ ಕೌಶಲ್ಯಾಭಿವೃದ್ಧಿ ದಿನಾಚರಣೆ
ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ಮತ್ತು ದ.ಕ ಜಿಲ್ಲಾಸಹಕಾರಿ ಯೂನಿಯನ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 67ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ‘ಕೊರೋನಾ ಸೋಂಕು-ಆತ್ಮನಿರ್ಭರ ಭಾರತ -ಸಹಕಾರ ಸಂಸ್ಥೆಗಳು’ ಎಂಬ ಧ್ಯೇಯಯೊಂದಿಗೆ ‘ವ್ಯವಹಾರ ಉದ್ಯೋಗ ಕಳೆದುಕೊಂಡವರು, ಭಾಧಿತರು ಪುನರುದ್ಯೋಗಸ್ಥರಾಗಲು ಕೌಶಲ್ಯಾಭಿವೃದ್ಧಿ’ ದಿನಾಚರಣೆ ನವೆಂಬರ್ 18 ರಂದು ಬೆಳಿಗ್ಗೆ 10.30 ಕ್ಕೆ ಮಂಗಳೂರು ಕುಲಶೇಖರ ಡೇರಿ ಆವರಣದಲ್ಲಿ ನಡೆಯಲಿದೆ.
ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕ ವೇದವ್ಯಾಸ ಡಿ. ಕಾಮತ್ ಸಹಕಾರ ಸಪ್ತಾಹದ ಉದ್ಘಾಟನೆ ಮಾಡಲಿದ್ದಾರೆ.ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿಯ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ನಂದಿನಿ ಅನ್ ವೀಲ್ಸ್ ವಾಹನಕ್ಕೆ ಚಾಲನೆ ನೀಡಲಿದ್ದಾರೆ.ಮಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಬಹಿರಂಗ ವಾಹನ ಹರಾಜು
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಅಧೀನದಲ್ಲಿರುವ ಕೆಎ 19 ಜಿ 313 ಟಾಟಾ ಸ್ಪೇಸಿಕೋ (ಏಂ 19 ಉ 313 ಖಿಂಖಿಂ SPಂಅIಔ) ಹಳೆಯ ವಾಹನವನ್ನು ನವೆಂಬರ್ 19 ರಂದು ಮಧ್ಯಾಹ್ನ 12 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಾರ್ಯಾಲಯ, ಮಂಗಳೂರು ದೂ.ಸಂ: 0824-2220584, 0824- 2220590, 1077 ಸಂಪರ್ಕಿಸಲು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 21 ರಂದು ತಲಪಾಡಿ ಗ್ರಾ.ಪಂ. ಜಮಾಬಂದಿ
ಮಂಗಳೂರು ತಾಲೂಕಿನ ತಲಪಾಡಿ ಗ್ರಾಮ ಪಂಚಾಯತ್ನ 2019-20ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ನವೆಂಬರ್ 21 ರಂದು ಬೆಳಿಗ್ಗೆ 11 ಕ್ಕೆ ತಲಪಾಡಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜರುಗಲಿದೆ.
ನ. 17 ರಂದು ತ್ರೈಮಾಸಿಕ ಕೆ.ಡಿ.ಪಿ. ಸಭೆ
ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ನವೆಂಬರ್ 17 ರಂದು ಬೆಳಿಗ್ಗೆ 10.30 ಕ್ಕೆ ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಬೆಳೆ ಸಮೀಕ್ಷೆ–ರೈತರಆಕ್ಷೇಪಣೆಗೆ ಅವಕಾಶ
ಪ್ರಸ್ತುತಸಾಲಿನ ಮುಂಗಾರು ಹಂಗಾಮಿನಲ್ಲಿ ನಡೆಸಲಾಗುತ್ತಿರುವ ಬೆಳೆ ಸಮೀಕ್ಷೆ ಪ್ರಕಾರರೈತರು ಮತ್ತು ಖಾಸಗಿ ನಿವಾಸಿಗಳು ನಡೆಸಿರುವ ಬೆಳೆ ಸಮೀಕ್ಷೆ ಮಾಹಿತಿ ನೋಡಲು ಬೆಳೆ ದರ್ಶಕಆಪ್ನ್ನು ಬಿಡುಗಡೆ ಮಾಡಲಾಗಿದೆ. ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ವಿಮೆ, ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಬಳಸಲಾಗುತ್ತದೆ.
ಬೆಳೆ ದರ್ಶಕ ಮೊಬೈಲ್ಅ್ಯಪ್ https://play.google.com/store/apps/detail?id=com.croop.offcsreportskhar ನಿಂದತಮ್ಮಜಮೀನಿನಲ್ಲಿದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು.
`ಬೆಳೆ ಸಮೀಕ್ಷೆ ಸಂದರ್ಭದಲ್ಲಿಜಮೀನಿನಲ್ಲಿತೆಗೆಯಲಾದ ಜಿ.ಪಿ.ಎಸ್. ಆಧಾರಿತಛಾಯಾಚಿತ್ರ ವೀಕ್ಷಿಸಬಹುದು. ಹಾಗೂ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಹಾಗೂ ಸಮೀಕ್ಷೆಯನ್ನು ಮೇಲ್ವಿಚಾರಣೆ ಮಾಡುವ ಸರ್ಕಾರಿ ಅಧಿಕಾರಿಗಳು ಅಂಗೀಕರಿಸಿದ್ದಾರೋ ಇಲ್ಲವೋಎಂದು ಷರಾಕಾಲಂನಲ್ಲಿ ತಿಳಿಯಬಹುದು.
ರೈತರು ಬೆಳೆದರ್ಶಕ ಅ್ಯಪ್ ಮೂಲಕ ಸಮೀಕ್ಷೆದಾರರು ದಾಖಲಿಸಿರುವ ಮಾಹಿತಿ ಪರಿಶೀಲಿಸಿ ತಪ್ಪಿದ್ದರೆಆಕ್ಷೇಪಣೆ ಸಲ್ಲಿಸಬಹುದು. ಎಂದು ಮಂಗಳೂರು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.