ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಬಿ.ಸಿ.ರೋಡಿನ ಯೂನಿಕ್ ಎಜುಕೇರ್ ಸಂಸ್ಥೆಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ಅಧ್ಯಯನ ತಂತ್ರಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತಯಾರಿಯ ಬಗ್ಗೆ ನವೆಂಬರ್ 22 ರಂದು ಬಿ.ಸಿ.ರೋಡಿನ ಬಸ್ಸು ನಿಲ್ದಾಣದ ಬಳಿ ಇರುವ ರಾಜರಾಜೇಶ್ವರಿ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಗಾರ ನಡೆಯಲಿದೆ.
ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಕೃಷ್ಣ ಶ್ಯಾಮ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪನ್ಯಾಸಕ ಚೇತನ್ ಮುಂಡಾಜೆ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಆಸಕ್ತ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ನವೆಂಬರ್ 20 ಹೆಸರು ನೋಂದಾಯಿಸಿಕೊಳ್ಳಬಹುದು. ಈ ಬಗ್ಗೆ ವಿವರಗಳಿಗೆ ಮೊಬೈಲ್ ಸಂಖ್ಯೆ 9482057228 ಅಥವಾ 9844276869 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.