ನ 22 ರಿಂದ ನಾಲ್ಕು ಭಾನುವಾರ ಬಂಟ್ವಾಳದಲ್ಲಿ ಮತದಾರರ ಮಿಂಚಿನ ನೋಂದಣಿ ಅಭಿಯಾನ

ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ನವೆಂಬರ್ 22, 29, ಡಿಸೆಂಬರ್ 6 ಹಾಗೂ 13 ರಂದು ಈ ನಾಲ್ಕು ಭಾನುವಾರಗಳಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರು ತಿಳಿಸಿದ್ದಾರೆ.

ಮೇಲ್ಕಾಣಿಸಿದ ಈ ನಾಲ್ಕು ಭಾನುವಾರಗಳಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಎಲ್ಲಾ ಬೂತ್ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಮತಗಟ್ಟೆಗಳಲ್ಲಿ ಹಾಜರಿರುವಂತೆ ಸೂಚಿಸಿರುವ ತಹಶೀಲ್ದಾರರು 01-01-2020 ಕ್ಕೆ 18 ವರ್ಷ ತುಂಬಿದ ಎಲ್ಲಾ ಅರ್ಹ ಮತದಾರರು ಹಾಗೂ ಮತದಾರರ ಪಟ್ಟಿಯಲ್ಲಿ ವಿವಿಧ ಕಾರಣಗಳಿಗೆ ಹೆಸರು ನೋಂದಾವಣೆಯಾಗದೆ ಇರುವ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಪ್ರಧಾನ ವರದಿಗಾರರು,
ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...