Indian Youth Congress. (Photo: iyc.in)
ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್): ಚಿಕ್ಕಬಳ್ಳಾಪುರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ರಂಗೇರಿದ್ದು ಮೂರು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದು ಅಧ್ಯಕ್ಷ ಸ್ಥಾನಕ್ಕಾಗಿ ಮತ ಪಡೆಯಲು ಅಂತಿಮ ಕಸರತ್ತು ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ನಗರಸಭೆಯ ಮಾಜಿ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ವಕೀಲ ದಾವೂದ್ ಅವರ ಪುತ್ರ ಮುದಾಸ್ಸೀರ್, ಮಾಜಿ ನಗರಸಭೆಯ ಸದಸ್ಯ ಫೈರೋಝ್ ಪಾಷ ಅವರ ಪುತ್ರ ಹಾರೂನ್ ಪಾಷ ಹಾಗೂ ಚಿಕ್ಕಬಳ್ಳಾಪುರದ ವಿ.ಮಹೇಂದ್ರ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದಿದ್ದು ಮೂವರ ನಡುವೆ ಭಾರಿ ಪೈಪೋಟಿ ನಡೆಯುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಚಿಂತಾಮಣಿ, ಬಾಗೇಪಲ್ಲಿ,ಗೌರಿಬಿದನೂರು,ಗುಡಿಬಂಡೆ ತಾಲೂಕಿನಲ್ಲಿ ಸುಮಾರು 4 ಸಾವಿರಕ್ಕೂ ಅಧಿಕ ಯುವ ಕಾಂಗ್ರೆಸ್ ಮತದಾರರಿದ್ದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷದ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಶಿಫಾರಸ್ಸು ಇಲ್ಲದೇ ಯುವ ಮುಖಂಡರು ರಾಜಕೀಯಕ್ಕೆ ಬರಲು ಮುಕ್ತ ಅವಕಾಶ ಕಲ್ಪಿಸಲು ಪಕ್ಷದ ಮುಖಂಡ ರಾಹುಲ್ಗಾಂಧಿ ಅವರು ಚುನಾವಣೆಯ ಮೂಲಕ ಯುವ ನಾಯಕರನ್ನು ಆಯ್ಕೆ ಮಾಡಲು ಅವಕಾಶ ಕಲ್ಪಿಸಿದ್ದಾರೆ ಆದರೂ ಸಹ ಪಕ್ಷದ ಮುಖಂಡರು ತಮ್ಮ ಬಣದ ಅಥವಾ ಸಂಬಂಧಿಕರನ್ನು ಅಥವಾ ಜಾತಿಯ ಅಭ್ಯರ್ಥಿಗಳನ್ನು ಗೆಲ್ಲಿಸಲು ಪರೋಕ್ಷವಾಗಿ ಲಾಭಿ ನಡೆಸುತ್ತಿದ್ದಾರೆ ಎಂದು ದೂರು ಸಹ ಕೇಳಿ ಬರುತ್ತಿದೆ.
ಒಟ್ಟಾರೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಯುವಕರು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದು ಯುವ ಕಾಂಗ್ರೆಸ್ನ ಮತದಾರರನ್ನು ಆಕರ್ಷಿಸಲು ಅಭ್ಯರ್ಥಿಗಳು ತಮ್ಮ ತಮ್ಮ ಅಜೆಂಡ ಮತ್ತು ಯೋಜನೆಗಳನ್ನು ವಿವರಿಸಿ ಮತಯಾಚಿಸುತ್ತಿದ್ದಾರೆ ಮತ್ತೊಂದಡೆ ಕೆಲ ಕಾಂಗ್ರೆಸ್ ಶಾಸಕರು ಮತ್ತು ಮುಖಂಡರು ಸಹ ತಮ್ಮ ತಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಲು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎನ್ನಲಾಗಿದೆ.
ಯುವ ಕಾಂಗ್ರೆಸ್ ಮೂಲಕ ಸಿದ್ದಪಡಿಸಿರುವ ಆಪ್ ಮೂಲಕ ಆನ್ಲೈನ್ನಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು ಜನವರಿ 12 ರಂದು ಚುನಾವಣೆ ನಡೆಯಲಿದೆ ಜಿಲ್ಲಾದ್ಯಂತ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಚುನಾವಣೆ ರಂಗೇರಿದ್ದು ಈ ಮೂವರಲ್ಲಿ ಯಾರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.
ವರದಿ:ತೆ.ಮೀಂ.ಅನ್ಸಾರಿ ಚಿಕ್ಕಬಳ್ಳಾಪುರ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.